Breaking News

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Advt_Headding_Middle
Advt_Headding_Middle

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ಜ. 16 ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭಗೊಂಡ ವರ್ಷಾವಧಿ ಜಾತ್ರೋತ್ಸವವು ಜ. 21 ರಂದು ಸಂಪನ್ನಗೊಂಡಿತು.

ಚಿತ್ರ : ಪ್ರೇಮ್ ಬೆಳ್ಳಾರೆ

ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಜ. 21 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ, ಉಳ್ಳಾಕುಲು ಮತ್ತು ಮಹಿಷಂತಾಯ ದೈವಗಳ ನೇಮ ನಂತರ ಪ್ರಸಾದ ವಿತರಣೆ ನಡೆಯಿತು. ನಂತರ ಪಿಲಿಭೂತದ ಭಂಡಾರ ತೆಗೆದು ಮಧ್ಯಾಹ್ನ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ಬಳಿಕೆ ಮಹಾ ಅನ್ನಸಂತರ್ಪಣೆ ನಡೆಯಿತು.

ಸಂಜೆ ಪಿಲಿಭೂತದ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಕಲ್ಲುರ್ಟಿ ದೈವದ ನೇಮ, ಪ್ರಸಾದ ವಿತರಣೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಪನಾ ಸಮಿತಿ ಅಧ್ಯಕ್ಷ ನಿರಂಜನ ಶೆಟ್ಟಿ ಪಾಲ್ತಾಡು, ಸಮಿತಿಯ ಸದಸ್ಯರು ಮತ್ತು ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.