ಸುಳ್ಯದಲ್ಲಿ ಅರೆಭಾಷೆ ಸಾಹಿತ್ಯ ಸಮ್ಮೇಳನ, ಫೆ. 2 ರಂದು ಪೂರ್ವಭಾವಿ ಸಭೆ

Advt_Headding_Middle
Advt_Headding_Middle

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದ್ದು, ಈ ಕುರಿತು ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ ಸಭೆಯನ್ನು ಫೆ. ೨ರಂದು ಸುಳ್ಯದ ವೆಂಕಟರಮಣ ಕೋ-ಆಪರೇಟಿವ್ ಸೊಸೈಟಿಯ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ್ ತಿಳಿಸಿದರು.


ಜ. ೨೫ರಂದು ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರೆಭಾಷೆ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಈಗಾಗಲೇ 2 ಸಭೆಗಳನ್ನು ನಡೆಸಲಾಗಿದೆ. ಮಾರ್ಚ್ ತಿಂಗಳಲ್ಲಿ ಸಮ್ಮೇಳನವನ್ನು ಸುಳ್ಯದಲ್ಲಿ ನಡೆಸಲು ಮಾತನಾಡಿಕೊಂಡಿದ್ದೇವೆ. ಫೆ. ೨ರಂದು ನಡೆಯುವ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಿದ್ದೇವೆ ಮತ್ತು ಸ್ವಾಗತ ಸಮಿತಿಯನ್ನು ರಚಿಸಿಕೊಂಡು ಕಾರ್ಯಕ್ರಮದ ರೂಪುರೇಷೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರುಗಳಾದ ಎ.ಕೆ.ಹಿಮಕರ, ಕಾಮಧೇನು ಮಾಧವ ಗೌಡ, ಪರಶುರಾಮ ಚಿಲ್ತಡ್ಕ, ದಿನೇಶ್ ಹಾಲೆಮಜಲು ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.