Breaking News

ಕುಕ್ಕುಜಡ್ಕದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮ

Advt_Headding_Middle
Advt_Headding_Middle


ಕೇಂದ್ರ ಸರಕಾರದ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸುವುದಕ್ಕಾಗಿ ಜಾಗೃತಿ ಕಾರ್ಯಕ್ರಮವನ್ನು ಶಿಶು ಅಭಿವೃದ್ಧಿ ಇಲಾಖೆಯವರು ಹಮ್ಮಿಕೊಂಡಿದ್ದು, ಈ ಸಪ್ತಾಹದ ೧ ದಿನದ ಕಾರ್ಯಕ್ರಮ ಇಂದು ಕುಕ್ಕುಜಡ್ಕದಲ್ಲಿ ಅಮರಮುಡ್ನೂರು ಗ್ರಾ.ಪಂ. ಸಹಯೋಗದಲ್ಲಿ ನಡೆಯಿತು.


ಅಮರಮುಡ್ನೂರು ಗ್ರಾ.ಪಂ. ಕಚೇರಿಯಲ್ಲಿ ಸೇರಿದ ಸ್ಥಳೀಯ ಮಹಿಳಾ ಮಂಡಲದ ಸದಸ್ಯೆಯರು, ಸ್ಥಳೀಯ ಶಾಲೆಗಳ ವಿದ್ಯಾರ್ಥಿನಿಯರು, ಅಧ್ಯಾಪಕಿಯರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಸರಸ್ವತಿ ಮತ್ತು ಮೇಲ್ವಿಚಾರಕಿ ಶ್ರೀಮತಿ ವಿಜಯ, ಗ್ರಾ.ಪಂ. ಅಧ್ಯಕ್ಷರು ಮತ್ತು ಸದಸ್ಯರು, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರು ಮೊದಲಾದವರಿದ್ದು, ಕುಕ್ಕುಜಡ್ಕ ಪೇಟೆಯಲ್ಲಿ ಮೆರವಣಿಗೆ ನಡೆಸಲಾಯಿತು.

ಬಳಿಕ ಗ್ರಾ.ಪಂ. ಸಭಾಭವನದಲ್ಲಿ ನಡೆದ ಮಾಹಿತಿ ಶಿಬಿರದಲ್ಲಿ ನ್ಯಾಯವಾದಿ ಸುಧಾಕರ ನೆಟ್ಟಾರು ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಬಗ್ಗೆ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಇರುವ ಕಾನೂನಿನ ಮಾಹಿತಿಯನ್ನು ಸಭೆಗೆ ನೀಡಿದರು. ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸೀತಾ ಎಚ್.ಅಧ್ಯಕ್ಷತೆ ವಹಿಸಿದ್ದರು.

ಎಪಿಎಂಸಿ ಉಪಾಧ್ಯಾಕ್ಷೆ ಶ್ರೀಮತಿ ಸುಕನ್ಯಾ, ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಮಧುಮತಿ ಬೊಳ್ಳೂರು, ಗ್ರಾ.ಪಂ. ಸದಸ್ಯರಾದ ತಿಮ್ಮಪ್ಪ ಗೌಡ ಕೊಂಡೆಬಾಯಿ ಹಾಗೂ ಶಿವರಾಮ ಗೌಡ ಕೆರೆಮೂಲೆ, ಇಲೆಕ್ಟ್ರಿಕಲ್ ಗುತ್ತಿಗೆದಾರ ಮಾಯಿಲಪ್ಪ ಸಂಕೇಶ, ಪಿಡಿಒ ಆಕಾಶ್, ಮೇಲ್ವಿಚಾರಕಿ ವಿಜಯ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.