Breaking News

ಉಬರಡ್ಕದಲ್ಲಿ ರಂಜಿಸಿದ ಯಕ್ಷ ವೈಭವ ಮತ್ತು ಸಾಂಸ್ಕೃತಿಕ ವೈವಿಧ್ಯ

Advt_Headding_Middle
Advt_Headding_Middle

ಮಕ್ಕಳಲ್ಲಿರುವ ಯಕ್ಷಗಾನ ಪ್ರತಿಭೆಯನ್ನು ಪ್ರೋತ್ಸಾಹಿಸಿದಾಗ ಅವರ ಮೂಲಕ ಯಕ್ಷಗಾನ ಬೆಳೆಯುತ್ತದೆ ಮತ್ತು ಬೆಳಗುತ್ತದೆ. ಈ ನಿಟ್ಟಿನಲ್ಲಿ ಸುಬ್ರಹ್ಮಣ್ಯ ದೇವಾಲಯದಿಂದಲೂ ಮಕ್ಕಳ ಯಕ್ಷಗಾನಕ್ಕೆ ಪ್ರೋತ್ಸಾಹಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಕುಕ್ಕೆಶ್ರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ಉಬರಡ್ಕ ಮಿತ್ತೂರು ಶ್ರೀ ನರಸಿಂಹ ಶಾಸ್ತಾವು ಮಕ್ಕಳ ಯಕ್ಷಕಲಾ ಸಂಘದ ೩ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜ. ೨೬ರಂದು ಉಬರಡ್ಕ ಮಿತ್ತೂರು ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ಯಕ್ಷ ವೈಭವ, ಸಾಂಸ್ಕೃತಿಕ ವೈವಿಧ್ಯ, ಸನ್ಮಾನ ಮತ್ತು ಗೌರವಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ರಾಘವ ಡಿ.ರಾವ್ ವಹಿಸಿದ್ದರು. ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ಖ್ಯಾತ ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ಭಟ್, ಉಬರಡ್ಕ ಮಿತ್ತೂರು ಗ್ರಾ.ಪಂ. ಅಧ್ಯಕ್ಷ ಹರಿಪ್ರಸಾದ್ ಪಾನತ್ತಿಲ, ಉಬರಡ್ಕ ಮಿತ್ತೂರು ಸ.ಹಿ.ಪ್ರಾ.ಶಾಲಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪ್ರಾಧ್ಯಾಪಕ ಈಶ್ವರಕುಮಾರ್ ಭಟ್ ಉಬರಡ್ಕ, ನರಸಿಂಹ ಶಾಸ್ತಾವು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜತ್ತಪ್ಪ ಗೌಡ, ಮಿತ್ತೂರು ಜೋಡು ದೈವಸ್ಥಾನದ ಅಧ್ಯಕ್ಷ ವೆಂಕಟ್ರಮಣ ಕೆದಂಬಾಡಿ, ಉಬರಡ್ಕ ಮಿತ್ತೂರು ಸ.ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಧನಲಕ್ಷ್ಮೀ , ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶ್ರೀ ನರಸಿಂಹ ಶಾಸ್ತಾವು ಮಕ್ಕಳ ಯಕ್ಷ ಕಲಾ ಸಂಘದ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಕಾಡುತೋಟ ಸ್ವಾಗತಿಸಿದರು. ಸಂಚಾಲಕ ಬಾಲಕೃಷ್ಣ ನಾಯರ್ ನೀರಬಿದಿರೆ ಪ್ರಸ್ತಾವನೆಗೈದರು. ಕಾರ್ಯದರ್ಶಿ ಶ್ರೀಮತಿ ಶೋಭಾ ವಿದ್ಯಾನಂದ ವಂದಿಸಿದರು. ಮನೋಜ್ ಪಾನತ್ತಿಲ ಕಾರ್ಯಕ್ರಮ ನಿರೂಪಿಸಿದರು.
ವಾರ್ಷಿಕೋತ್ಸವ ಸಮಿತಿ ಕಾರ್ಯದರ್ಶಿ ಶಶಿಧರ ನಾಯರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

* ಸಮಾರಂಭದಲ್ಲಿ ಖ್ಯಾತ ಯಕ್ಷಗಾನ ಭಾಗವತ ಜಯಾನಂದ ಪಾನತ್ತಿಲ ಅವರನ್ನು ಸನ್ಮಾನಿಸಲಾಯಿತು. ಯಕ್ಷಕಲಾ ಸಂಘಕ್ಕೆ ಚೆಂಡೆ ಕೊಡುಗೆಯಾಗಿ ನೀಡಿದ ಸುಳ್ಯದ ಸಂಸ್ಕೃತಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಯರಾಮ ಬೊಳಿಯಮಜಲುರವರನ್ನು ಗೌರವಿಸಲಾಯಿತು.

* ಆರಂಭದಲ್ಲಿ ಉಬರಡ್ಕ ಮಿತ್ತೂರು ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ವೈವಿಧ್ಯ ನಡೆಯಿತು. ಬಳಿಕ ಕಲಾ ಸಂಘದ ವಿದ್ಯಾರ್ಥಿಗಳಿಂದ ವಿದ್ಯುನ್ಮತಿ ಕಲ್ಯಾಣ ಎಂಬ ಯಕ್ಷಗಾನ ಪ್ರದರ್ಶನಗೊಂಡಿತು. ಸಭಾ ಕಾರ್ಯಕ್ರಮದ ಬಳಿಕ ಹವ್ಯಾಸಿ ಕಲಾವಿದರಿಂದ ನರಕಾಸುರ ಮೋಕ್ಷ ಯಕ್ಷಗಾನ ಪ್ರದರ್ಶನ ನಡೆಯಿತು.

* ಯಕ್ಷಗಾನ ತರಬೇತಿ ಪಡೆದ ವಿದ್ಯಾರ್ಥಿಗಳ ಪರವಾಗಿ ಯಕ್ಷಗಾನ ಗುರು ಬಾಲಕೃಷ್ಣ ನಾಯರ್‌ರವರನ್ನು ಸನ್ಮಾನಿಸಲಾಯಿತು.

* ೨೦೧೭-೧೮ನೇ ಸಾಲಿನಲ್ಲಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.