ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ 70 ನೇ ಪ್ರಜಾಪ್ರಭುತ್ವ ದಿನಾಚರಣೆ

Advt_Headding_Middle
Advt_Headding_Middle

ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ 7೦ನೇ ಪ್ರಜಾಪ್ರಭುತ್ವದ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಬ್ರಿಜಿದ್ ದೇವಾಲಯದ ವಸತಿ ಗುರುಗಳಾದ ವಂ. ಪೌಲ್ ಸೆಬೆಸ್ಟಿಯನ್ ಡಿ’ಸೋಜಾರವರು ವಹಿಸಿಕೊಂಡು ಧ್ವಜಾರೋಹಣಗೈದು ವಿದ್ಯಾರ್ಥಿ ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಉಪಸ್ಥಿತರಿದ್ದ ಪ್ರಾಥಮಿಕ ಶಾಲಾ ಪೋಷಕ ಸಮಿತಿಯ ಅಧ್ಯಕ್ಷರಾದ ಗುರುಪ್ರಸಾದ್ ರೈ, ಪಾಲನ ಸಮಿತಿಯ ಉಪಾಧ್ಯಕ್ಷರಾದ ಪ್ರಸನ್ನ ಪೀಟರ್ ಡಿ ಸೋಜಾರವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಹಾಗೂ ಶಾಲಾ ಮುಖ್ಯೋಪಾಧ್ಯಯಿನಿ ಸಿ| ಬಿನೋಮ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಕುಮಾರಿ ಬಶೈರ ಹಾಗೂ ಮಿಝ ನಿರೂಪಿಸಿದರು. ವಿದ್ಯಾರ್ಥಿನಿ ಲಿಪಿಶ್ರೀ ಉದ್ಘೋಷಣೆ ಮಾಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.