ಪಾಟಾಜೆ: ಮಹಮ್ಮಾಯಿ ದೇವಿ ಹಾಗೂ ಪರಿವಾರ ದೈವಗಳ ಪುನ: ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ

Advt_Headding_Middle
Advt_Headding_Middle

ಬೆಳ್ಳಾರೆ ಗ್ರಾಮದ ಪಾಟಾಜೆ ಶ್ರೀ ಮಹಾಮ್ಮಾಯಿ ಅಮ್ಮನವರ ಆರಾಧನಾ ಸಮಿತಿ ಇದರ ವತಿಯಿಂದ ಪಾಟಾಜೆಯಲ್ಲಿ ಮಹಮ್ಮಾಯಿ ದೇವಿ ಹಾಗೂ ಪರಿವಾಎ ದೈವಗಳ ಪುನ: ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಫೆ.26 ಮತ್ತು ಫೆ 28ರಂದು ದೇರೆ ಬೈಲ್ ತಂತ್ರಿ ರಾಘವೇಂದ್ರ ಪ್ರಸಾದ್ ಶಾಸ್ತ್ರಿ ಮುಕ್ಕೂರು ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಫೆ.27 ರಂದು ನಡೆದ ಸಭಾಕಾರ್ಯಕ್ರಮದಲ್ಲಿ ದೈವಜ್ಞರಾದ ರಾಜೇಂದ್ರ ಪ್ರಸಾದ್ ನೆಟ್ಟಾರು ಶುಭಾಸಂಶನೆಯನ್ನು ನೆರವೇರಿಸಿದರು.


ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿಠಲದಾಸ್ ಎನ್.ಎಸ್.ಡಿ. ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಮಹೇಶ್ ಕರಿಕ್ಕಳ, ಶ್ರೀಮತಿ ರಾಜೀವಿ ಆರ್ ರೈ, ನ್ಯಾಯವಾದಿ ಜಯಪ್ರಕಾಶ ರೈ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಶೇಖರ ಕಾಮತ್, ಮುಕ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ದಯಾಕರ ಆಳ್ವ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಅನಿಲ್ ರೈ, ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ಶ್ರೀರಾಮ ಪಾಟಾಜೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫ,ಆರಾಧನಾ ಸಮಿತಿ ಅಧ್ಯಕ್ಷ ಹರೀಶ, ಪ್ರಗತಿಪರ ಕೃಷಿಕರಾದ ಸತ್ಯನಾರಾಯಣ ಕೋಡಿಬೈಲು,ಚಲ್ಲ ಪಾಂಬಾರು ಉಪಸ್ಥಿತರಿದ್ದರು. ದೇವಸ್ಥಾನಕ್ಕೆ ಸ್ಥಳದಾನ ಮಾಡಿದ ಕುಂಞ ಇವರನ್ನು ಸನ್ಮಾನಿಸಲಾಯಿತು. ಕಟ್ಟಡ ಕೆಲಸ ಮಾಡಿದ ಪದ್ಮನಾಭ ಇವರನ್ನು ಸನ್ಮಾನಿಸಲಾಯಿತು. ಎನ್.ಎಸ್.ಡಿ.ವಿಠಲದಾಸ್ ಸ್ವಾಗತಿಸಿ, ಗ್ರಾಹಕ ರಕ್ಷಣಾ ಪೆಇಷತ್ ಸದಸ್ಯ ಸಚಿನ್ ರಾಜ್ ಶೆಟ್ಟಿ ವಂದಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.
ಧಾರ್ಮಿಕ ಕಾರ್ಯಕ್ರಮಗಳು : ಫೆ.೨೭ ರಂದು ಸಂಜೆ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ,ಸಪ್ತಶುದ್ಧಿ,ಪ್ರಾಸಾದ ಶುದ್ಧಿ, ರಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತುಪೂಜೆ, ವಾಸ್ತುಬಲಿ, ಪ್ರಾಕಾರ ಬಲಿ, ಪ್ರಸಾದ ವಿತರಣೆ ನಡೆಯಿತು. ಫೆ.೨೮ ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ,ಬ್ರಹ್ಮಕಲಶ ಪೂಜೆ,ಸಾನ್ನಿಧ್ಯ ಪೂಜೆ,ಶ್ರೀ ಮಹಾಮ್ಮಾಯಿ ದೇವಿ ಹಾಗೂ ಪರಿವಾರ ದೈವಗಳ ಪುನ:ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ, ಅಲಂಕಾರ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.ನೂರಾರು ಜನ ಭಕ್ತಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಪ್ರಸಾದ ಭೋಜನ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.