Breaking News

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಭಕ್ತಿ-ಸಡಗರದ ಪ್ರತಿಷ್ಠಾ ವಾರ್ಷಿಕೋತ್ಸವ

Advt_Headding_Middle
Advt_Headding_Middle

 

ಐವತ್ತೊಕು ಎಣ್ಮೂರು ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮಾ. 7 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಮುಂಜಾನೆ ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ,ನಾಗದೇವರಿಗೆ ಮತ್ತು ದೈವಗಳಿಗೆ ಕಲಶಾಭಿಷೇಕ ಮತ್ತು ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ. ಸಂಜೆ ದೈವಗಳ ಭಂಡಾರ ತೆಗೆಯಲಾಯಿತು. ರಾತ್ರಿ ಮಹಾಪೂಜೆ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂvಕಟ್ಟೆ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ, ಹಾಗೂ ಶ್ರೀ ಚಾಮುಂಡಿ ಅಮ್ಮನವರ ಮತ್ತು ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಿತು. ಶ್ರೀ ದೇವರ ಬಲಿಯೊಂದಿಗೆ ಚೆಂಡೆ.ಬ್ಯಾಂಡ್,ವಾಲಗ ಹಾಗೂ ಭಜನಾ ತಂಡ,ನೂರಾರು ಭಕ್ತರು ಪಾಲ್ಗೊಂಡಿದ್ದರು. ಇದೇ ಸಂದರ್ಭ ಆಕರ್ಷಕ ಸಿಡಿಮದ್ದು ಪ್ರದರ್ಶನ ಜರುಗಿತು. ಉತ್ಸವದ ಪ್ರಯುಕ್ತ ದೇವಳವನ್ನು ವಿದ್ಯುತ್ ದೀಪಗಳು ಮತ್ತು ಹೂವಿನಿಂದ ಶೃಂಗರಿಸಲಾಗಿತ್ತು. ಮಾ.೬.ರಂದು ಹಸಿರು ಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಶ್ರೀ ದೇವರಿಗೆ ರಂಗಪೂಜೆ ನಡೆಯಿತು. ಉತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಆಡಳಿತ ಮಂಡಳಿ, ಅರ್ಚಕ ವೃಂದ, ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.