ಕುಕ್ಕೆ ಸುಬ್ರಹ್ಮಣ್ಯ: ನಿವೃತ್ತ ಪ್ರಾಂಶುಪಾಲ ಕೆ.ಆರ್. ಶೆಟ್ಟಿಗಾರ್, ಕಛೇರಿ ಅಧೀಕ್ಷಕ ರಾಮಕೃಷ್ಣ ಭಟ್ ಬೀಳ್ಕೊಡುಗೆ

Advt_Headding_Middle
Advt_Headding_Middle

ಕುಕ್ಕೆ ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಪ್ರೊ. ರಂಗಯ್ಯ ಶೆಟ್ಟಿಗಾರ್ ಮತ್ತು ಕಛೇರಿ ಅಧೀಕ್ಷಕರಾಗಿ ನಿವೃತ್ತಿ ಹೊಂದಿದ್ದ ರಾಮಕೃಷ್ಣ ಕೆ.ಇ.ಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಮಾ. 9ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಪ್ಪಿನಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಅಭಿನಂದನಾ ಭಾಷಣ ಮಾಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೋಹನ್‌ದಾಸ್ ರೈ, ಪೂರ್ವವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶ್ರೀಮತಿ ರಾಜೀವಿ ಆರ್. ರೈ, ಬಾಲಕೃಷ್ಣ ಬಳ್ಳೇರಿ, ಮಾಧವ ಸುಬ್ರಹ್ಮಣ್ಯ, ಕೃಷ್ಣಮೂರ್ತಿ ಭಟ್, ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ ಮಾಸ್ಟರ್ ಪ್ಲಾನ್ ಉಸ್ತುವಾರಿ ಸಮಿತಿ ಸದಸ್ಯ ಶಿವರಾಮ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೃತ್ತ ಪ್ರಾಂಶುಪಾಲ ಕೆ.ರಂಗಯ್ಯ ಶೆಟ್ಟಿಗಾರ್, ಶ್ರೀಮತಿ ವಿಮಲಾ ರಂಗಯ್ಯ, ನಿವೃತ್ತ ಕಛೇರಿ ಅಧೀಕ್ಷಕ ರಾಮಕೃಷ್ಣ ಕೆ.ಇ ಮತ್ತು ಶ್ರೀಮತಿ ಗಾಯತ್ರಿ ರಾಮಕೃಷ್ಣ ದಂಪತಿಗಳನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಉಪನ್ಯಾಸಕಿ ಪ್ರೊ. ಶ್ರೀಲತಾ ಸನ್ಮಾನ ಪತ್ರ ವಾಚಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ್ ಎನ್. ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿ ಪ್ರೊ. ಆರತಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಪ್ರೊ. ಉದಯಕುಮಾರ್ ವಂದಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರೊ. ಬಾಲಕೃಷ್ಣ ಪೈ, ಪೂರ್ವ ವಿದ್ಯಾರ್ಥಿಗಳಾದ ಗುಡ್ಡಪ್ಪ ಬಲ್ಯ, ದುಗ್ಗಪ್ಪ, ರಾಜೇಶ್ ಎನ್.ಎಸ್, ಚಿನ್ನಪ್ಪ, ಧನಂಜಯ ಮೊದಲಾದವರು ನಿವೃತ್ತರಿಗೆ ಶುಭ ಹಾರೈಸಿದರು.

ಕಾಲೇಜಿನ ರಕ್ಷಕ ಶಿಕ್ಷಕ ಸಂಘ, ರೋಟರ‍್ಯಾಕ್ಟ್ ಕ್ಲಬ್, ಬೋಧಕೇತರ ಸಿಬ್ಬಂದಿ ವರ್ಗ, ದೇವಸ್ಥಾನದ ವತಿಯಿಂದ ಗ್ರಂಥಾಲಯ ಸಿಬ್ಬಂದಿಗಳ ವತಿಯಿಂದ, ಕಾಲೇಜಿನ ವಿವಿಧ ತರಗತಿ ವತಿಯಿಂದ ಹಾಗೂ ವೈಯಕ್ತಿಕವಾಗಿ ನಿವೃತ್ತರನ್ನು ಸನ್ಮಾನಿಸಿ ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.