Breaking News

ಚುನಾವಣಾ ಸ್ಪೆಷಲ್ : ಲೋಕಸಭೆ ಚುನಾವಣೆ : ಸಾಮಾಜಿಕ ಜಾಲತಾಣಗಳ ಮೇಲೆ ವಿಶೇಷ ನಿಗಾ

Advt_Headding_Middle
Advt_Headding_Middle

ಲೋಕಸಭಾ ಚುನಾವಣೆಯನ್ನು ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ವಿಶೇಷ ನಿಗಾ ಇರಿಸಲಿದೆ.


ಈ ವರೆಗೆ ಪತ್ರಿಕೆಗಳು ಹಾಗೂ ಟಿವಿ ಮಾಧ್ಯಮಗಳ ಚುನಾವಣಾ ಜಾಹೀರಾತುಗಳ ಮೇಲೆ ನಿಗಾ ವಹಿಸುತ್ತಿದ್ದ ಚುನಾವಣಾ ಆಯೋಗ ಇದೇ ಮೊದಲ ಬಾರಿ ಆನ್‌ಲೈನ್ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ವಹಿಸಲಿದೆ ಹಾಗೂ ಮಾರ್ಗದರ್ಶಿ ನಿಯಮಗಳನ್ನು ರೂಪಿಸಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗುವ ರಾಜಕೀಯ ಪಕ್ಷಗಳ ಎಲ್ಲಾ ಜಾಹೀರಾತುಗಳು ಕಡ್ಡಾಯವಾಗಿ ಚುನಾವಣಾ ಆಯೋಗದ ನುಮತಿ ಪಡೆದಿರಬೇಕು. ಅಭ್ಯರ್ಥಿಗಳು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯ ವಿವರಗಳನ್ನು ನಾಮಪತ್ರ ಸಲ್ಲಿಕೆ ವೇಳೆ ನಮೂದಿಸಬೇಕು ಎಂದು ನಿಯಮದಲ್ಲಿ ಹೇಳಲಾಗಿದೆ.
ಇದೇ ವೇಳೆ ಜಾಹೀರಾತುಗಳಿಗೆ ನಿಗಾ ವಹಿಸಲು ಸಮಿತಿ ರಚಿಸಲಾಗುತ್ತದೆ. ಇದೇ ವೇಳೆ ಸಾಮಾಜಿಕ ಮಾಧ್ಯಮಗಳ ಜಾಹೀರಾತುಗಳ ಬಗ್ಗೆ ಆಕ್ಷೇಪವಿದ್ದರೆ ಅವುಗಳ ಸ್ವೀಕಾರಕ್ಕೆ ದೂರು ಘಟಕವನ್ನೂ ಸೃಜಿಸಲಾಗುತ್ತದೆ. ಸಾಮಾಜಿಕ ಮಾಧ್ಯಮಗಳ ಮಾಧ್ಯಮಗಳ ಜಾಹೀರಾತುಗಳನ್ನು ಜನಪ್ರತಿನಿಧಿ ಕಾಯ್ದೆಯ ೧೨೬ (೧) ಪರಿಚ್ಛೇದದ ಅಡಿ ತರಲಾಗುತ್ತದೆ.
ನಕಲಿ ಸೋಷಿಯಲ್ ಮೀಡಿಯಾ ಖಾತೆಗಳ ಮೂಲಕ ಅಪಪ್ರಚಾರ ನಡೆಯಬಹುದಾದ ಹಿನ್ನಲೆಯಲ್ಲಿ ಅಭ್ಯರ್ಥಿಗಳು ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಸಾಮಾಜಿಕ ಜಾಲತಾಣಗಳ ವೈಯಕ್ತಿಕ ಖಾತೆಯಲ್ಲೂ ನಿಂದನಾತ್ಮಕ ಪ್ರಚಾರ ಮಾಡುವುದರಲ್ಲಿ ನಿಷೇಧ ಹೇರಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವುದಕ್ಕೆ ಕೆಲವೊಂದು ಷರತ್ತು ವಿಧಿಸಿದ್ದು, ಸಾಮಾಜಿಕ ಜಾಲತಾಣಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ ಹಾಕಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.