Breaking News

ಬಿಜೆಪಿಯಿಂದ ಸಮರ್ಥ ಅಭ್ಯರ್ಥಿಗಳು ಕಣಕ್ಕೆ : ಮಾಳವಿಕಾ

Advt_Headding_Middle
Advt_Headding_Middle

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಅತ್ಯಂತ ಸಮರ್ಥ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆಂದು ಪಕ್ಷದ ರಾಜ್ಯ ವಕ್ತಾರೆ ಶ್ರೀಮತಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.


ಪಕ್ಷದ ವತಿಯಿಂದ ಸುಳ್ಯದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ಅವರು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಅಭ್ಯರ್ಥಿಗಳ ಪಟ್ಟಿ ಬಹುತೇಕ ಪೂರ್ಣಗೊಂಡಿದೆ. ಅಭ್ಯರ್ಥಿಗಳಿಗೇ ಗೊತ್ತಿಲ್ಲದಂತೆ ಪಕ್ಷದ ತಂಡ ಎಲ್ಲಾ ಕ್ಷೇತ್ರಗಳಲ್ಲಿ ಸರ್ವೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸುತ್ತದೆ. ಉಳಿದ ಪಕ್ಷಗಳಂತೆ ನಿಷ್ಕ್ರಿಯರು ನಮ್ಮ ಪಕ್ಷದಲ್ಲಿ ಸ್ಪರ್ಧಿಸುವುದಿಲ್ಲ ಎಂದ ಅವರು ಮಹಿಳಾ ಅಭ್ಯರ್ಥಿಗಳ ಪ್ರಾಶಸ್ತ್ಯ ಕುರಿತಂತೆ ಕೇಳಲಾದ ಪ್ರಶ್ನೆಗೆ, ಗೆಲ್ಲುವ ಅಭ್ಯರ್ಥಿಗಳು ನಮ್ಮಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳಿದರು.
ನಾನು ಟಿಕೆಟ್ ಆಕಾಂಕ್ಷಿ ಅಲ್ಲ. ಆದರೆ ಹೈಕಮಾಂಡ್‌ಗೆ ಹೋದ ಪಟ್ಟಿಯಲ್ಲಿ ಹೆಸರಿದೆಯೋ ಎಂದು ಗೊತ್ತಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಶಾಸಕ ಎಸ್.ಅಂಗಾರ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.