Breaking News

ಚುನಾವಣಾ ಪ್ರಚಾರ ಸಭೆಗಳಿಗೆ ಸುಳ್ಯದಲ್ಲೇ ಅನುಮತಿ ನೀಡಲು ಕ್ರಮ : ಚುನಾವಣಾಧಿಕಾರಿ ಭರವಸೆ

Advt_Headding_Middle
Advt_Headding_Middle

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ತಾಲೂಕಿನ ವ್ಯಾಪ್ತಿಯೂ ಸೇರಿರುವುದರಿಂದ ಚುನಾವಣಾ ಪ್ರಚಾರ ಸಭೆಗಳಿಗೆ ಅನುಮತಿ ಪಡೆದುಕೊಳ್ಳುವುದು ಕಷ್ಟವಾಗುತ್ತಿದ್ದು, ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸುಳ್ಯದಲ್ಲೇ ಅನುಮತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಸಹಾಯಕ ಚುನಾವಣಾಧಿಕಾರಿ ಡಾ. ಮಂಜುನಾಥ್ ಭರವಸೆ ನೀಡಿದ್ದಾರೆ.


ಚುನಾವಣೆ ಹಿನ್ನಲೆಯಲ್ಲಿ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ, ವಿವಿಧ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆದ ಸಂದರ್ಭ ಕಾಂಗ್ರೆಸ್ ಮುಖಂಡ ಪಿ.ಎಸ್.ಗಂಗಾಧರ್‌ರವರು ಈ ಸಮಸ್ಯೆಯನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತಂದರು. ಸುಳ್ಯ ವಿಧಾನಸಭಾ ಕ್ಷೇತ್ರವು ಮೊದಲಿನ ಪುತ್ತೂರು ತಾಲೂಕು ಮತ್ತು ಈಗಿನ ಕಡಬ ತಾಲೂಕಿಗೆ ವಿಸ್ತರಿಸಿದೆ. ಹೀಗಾಗಿ ಈ ಕ್ಷೇತ್ರದ ಕೆಲವು ಕಡೆ ಸಭೆ ನಡೆಸಬೇಕಿದ್ದರೆ ಆಯಾ ತಾಲೂಕು ಪಂಚಾಯತ್ ಹಾಗೂ ಪೊಲೀಸ್ ಠಾಣೆಗಳ ಅನುಮತಿ ಪಡೆಯಬೇಕಾಗುತ್ತದೆ. ಇದು ಕಷ್ಟವಾಗುತ್ತಿದೆ. ಹೀಗಾಗಿ ಪಂಚಾಯತ್‌ಗಳ ಪರವಾನಿಗೆಯನ್ನು ಇಲ್ಲೇ ಪಡೆಯುವಂತೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಅನುಮತಿಯನ್ನೂ ಸುಳ್ಯ ವೃತ್ತದಲ್ಲಿಯೇ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದಾಗ ಚುನಾವಣಾಧಿಕಾರಿಯವರು ಈ ಕುರಿತಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.