ಡಿಸಿಸಿ ಬ್ಯಾಂಕ್ ಚುನಾವಣೆ ಬಿಜೆಪಿ ಪತನಕ್ಕೆ ನಾಂದಿ : ಜಯಪ್ರಕಾಶ್ ರೈ

Advt_Headding_Middle
Advt_Headding_Middle

ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಸಂಪೂರ್ಣ ಪರಾಭವಗೊಂಡಿರುವುದು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪತನದ ನಾಂದಿ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಹೇಳಿದ್ದಾರೆ.

ಪಕ್ಷದ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಿರಿಯ ಮಾರ್ಗದರ್ಶಕರಾದ ಎಂ.ಎನ್.ರಾಜೇಂದ್ರಕುಮಾರ್ ಅವರ ನೇತೃತ್ವದಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳು ವಿಜಯಿಯಾಗಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಸುಳ್ಯದಲ್ಲಿ ಸಹಕಾರ ಭಾರತಿ ಪ್ರತಿನಿಧಿಗಳಿಂದ ೭ ಮತಗಳ ಅಡ್ಡಮತವಾಗಿದೆ. ಇಲ್ಲಿ ಮತದಾರರು ಸಾಮಾನ್ಯ ಕಾರ್ಯಕರ್ತರಲ್ಲ. ಜನರಿಂದ ಆಯ್ಕೆಯಾದವರು. ಸಹಕಾರ ಭಾರತಿಯವರಿಗೆ ನಾವು ಹೇಳಿದಂತೆ ಎಲ್ಲರೂ ಕೇಳುವವರು ಎಂಬ ಭಾವನೆ ಇತ್ತು. ಬಿಜೆಪಿ ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಈ ವಿಚಾರ ಬಿಜೆಪಿಯಲ್ಲಿ ಗೊಂದಲ ಸೃಷ್ಟಿಮಾಡಿದಂತಾಗಿದೆ. ನಾಯಕರಿಗೆ ಉಸಿರು ಕಟ್ಟುವ ವಾತಾವರಣ ಇದ್ದಂತಿದೆ. ಇದು ಚುನಾವಣೆಯಲ್ಲಿ ಆ ಪಕ್ಷದ ವಿರುದ್ಧ ಕೆಲಸ ಮಾಡುತ್ತದೆ ಎಂದು ಹೇಳಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.