ತೊಡಿಕಾನ: ಅಕ್ರಮ ಮದ್ಯ ಮಾರಾಟ -ಆರೋಪಿಗೆ ಜಾಮೀನು

Advt_Headding_Middle
Advt_Headding_Middle

ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಮೋನಪ್ಪ ಎಂಬವರು ಮಾ.18 ರಂದು ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಮುಳಿಪಡ್ಪು ಎಂಬಲ್ಲಿ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದರು.

ಅಬಕಾರಿ ಇಲಾಖೆಯ ಕಾಯ್ದೆ ಕಲಂ 14,32 ಮತ್ತು 34 ರಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.ಸದ್ರಿ ಆರೋಪಿಯನ್ನು ಸುಳ್ಯ ನ್ಯಾಯಾಲಯವು ವಿಚಾರಣೆಗೊಳಪಡಿಸಿ ಮಾ.23 ರಂದು ಜಾಮೀನು ಮಂಜೂರುಗೊಳಿಸಿ ಆರೋಪಿಯನ್ನು ಬಿಡುಗಡೆ ಮಾಡಲಾಯಿತು. ಆರೋಪಿಯ ಪರವಾಗಿ ಸುಳ್ಯದ ನ್ಯಾಯವಾದಿ ಸತೀಶ್ ಕುಂಭಕ್ಕೋಡು ವಾದಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.