Breaking News

ಡಿ.ಸಿ.ಸಿ. ಬ್ಯಾಂಕ್ ಚುನಾವಣೆ : ಅಡ್ಡ ಮತದಾನ ಮಾಡಿದವರ ವಿರುದ್ಧ ಸೂಕ್ರ ಕ್ರಮ – ಬಿಜೆಪಿ ಜಿಲ್ಲಾಧ್ಯಕ್ಷ ಮಠಂದೂರು

Advt_Headding_Middle
Advt_Headding_Middle

“ಡಿ.ಸಿ.ಸಿ. ಬ್ಯಾಂಕ್‌ಗೆ ನಡೆದ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು“ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದ್ದಾರೆ.


ಮಾ.೨೮ರಂದು ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇದಲ್ಲಿ ಭಾಗವಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಈ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ
“ಡಿ.ಸಿ.ಸಿ. ಬ್ಯಾಂಕ್ ಚುನಾವಣೆಗೆ ಸಹಕಾರ ಭಾರತಿ ಸ್ಪರ್ಧೆ ಮಾಡಿತ್ತು. ಅದಕ್ಕೆ ಬಿಜೆಪಿ ಬಾಹ್ಯ ಬೆಂಬಲ ನೀಡಿತ್ತು. ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬುದರ ಕುರಿತು ಈಗಾಗಲೇ ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಅವರು ಯಾರೆಂದು ಗೊತ್ತಾದ ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಚುನಾವಣೆ ಕಳೆಯುವವರೆಗೆ ಕಾಯುವ ಪ್ರಶ್ನೆ ಇಲ್ಲ” ಎಂದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.