ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ತಾಂತ್ರಿಕ ಸಮ್ಮೇಳನ

Advt_Headding_Middle
Advt_Headding_Middle

ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2019 ರ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ತಾಂತ್ರಿಕ ಸಮ್ಮೇಳನವು ಎಪ್ರಿಲ್  9 ನೇ ತಾರೀಕಿನಂದು ಜರಗಲಿರುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎ.ಜ್ಞಾನೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ತಾಂತ್ರಿಕ ಉತ್ಸವದ ಸಲುವಾಗಿ “ತಂತ್ರಜ್ಞ- 19 ” ಎಂಬ ಶೀರ್ಷಿಕೆಯ ಅಡಿಯಲ್ಲಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳಿಗೆ ಮತ್ತು “ವಿಷನ್-19 ” ಎಂಬ ಶೀರ್ಷಿಕೆಯ ಅಡಿಯಲ್ಲಿ ಇಂಜಿನಿಯರಿಂಗ್ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿವಿಧ ತಾಂತ್ರಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಶ್ರೀ ಧರ್ಮಸ್ಥಳ ಮಂಜುನಾಥ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆ ಇದರ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಟಿ., ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ವಿವಿಧ ಇಂಜಿನಿಯರಿಂಗ್ ಕಾಲೇಜಿನ ಎಲ್ಲಾ ವಿಭಾಗದ ಸುಮಾರು 2೦೦ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಂಡು ವಿವಿಧ ತಾಂತ್ರಿಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಡಾ. ಸುನಿಲ್ ಕುಮಾರ್ ಎಂ. ಮತ್ತು ಡಾ. ಜಯವರ್ಧನ ಎಂ.ಎಲ್. ರವರು ಸಂಯೋಜಕರಾಗಿ ಈ ತಾಂತ್ರಿಕ ಸಮ್ಮೇಳನವನ್ನು ಆಯೋಜಿಸಲಿದ್ದಾರೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಡಾ| ರೇಣುಕಾಪ್ರಸಾದ್ ಕೆ.ವಿ, ಮತ್ತು ನಿರ್ದೇಶಕರಾದ ಡಾ. ಜ್ಯೋತಿ ಆರ್. ಪ್ರಸಾದ್ ಅವರ ಪ್ರೊತ್ಸಾಹ ಮತ್ತು ಮಾರ್ಗದರ್ಶನದಲ್ಲಿ ಈ ಸಮ್ಮೇಳನವನ್ನು ನಡೆಸಲಾಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.