Breaking News

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ವಲಯದ ಗಾಂಧಿನಗರ ಒಕ್ಕೂಟದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಪದಗ್ರಹಣ ಸಮಾರಂಭ

Advt_Headding_Middle
Advt_Headding_Middle

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ವಲಯದ ಗಾಂಧಿನಗರ ಒಕ್ಕೂಟದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಪದಗ್ರಹಣ ಸಮಾರಂಭವು ಮಾ. 31 ರಂದು ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ಸಭಾ ಕಾರ್ಯಕ್ರಮವನ್ನು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯ.ಸಮಿತಿ ಅಧ್ಯಕ್ಷ ಜಗದೀಶ ಪಡ್ಪು ಉದ್ಘಾಟಿಸಿದರು. ಶ್ರೀ ಕ್ಷೇ.ಧ.ಗ್ರಾ.ಯೋ. ಕೇಂದ್ರ ಒಕ್ಕೂಟದ ಅಧ್ಯಕ್ಷ ಜನಾರ್ದನ ಉಬರಡ್ಕ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ತಾ. ಜನಜಾಗೃತಿ ವೇದಿಕೆ ಸದಸ್ಯ ಎಂ. ವೆಂಕಪ್ಪ ಗೌಡ, ಶ್ರೀ.ಕ್ಷೇ.ಧ.ಗ್ರಾ.ಯೋ. ಗಾಂಧಿನಗರ ಒಕ್ಕೂಟದ ಸ್ಥಾಪಕಾಧ್ಯಕ್ಷ ಆನಂದ ಗೌಡ ನಾರ್ಕೋಡು ಉಪಸ್ಥಿತರಿದ್ದರು. ಕಾಯರ್ತೋಡಿ ಮಿತ್ರಬಳಗದ ಅಧ್ಯಕ್ಷ ಅನಿಲ್‌ರಾಜ್ ಕೆ., ಶ್ರೀ.ಕ್ಷೇ.ಧ.ಗ್ರಾ.ಯೋ. ಗಾಂಧಿನಗರ ಒಕ್ಕೂಟದ ಮಾಜಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಮಾಜಿ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ, ನಿಕಟಪೂರ್ವಾಧ್ಯಕ್ಷ ನಾಗರಾಜ ಪಿ.ಆರ್., ಶೀನಪ್ಪ ಪಡ್ರೆ, ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾಗರಾಜ ಪಿ.ಆರ್. ಸ್ವಾಗತಿಸಿ, ವಿಶ್ವನಾಥ ಶೆಟ್ಟಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.