ಎಪ್ರಿಲ್ 7 ರಂದು ಕುಮಾರಸ್ವಾಮಿ ಸುಳ್ಯಕ್ಕೆ

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಅಭ್ಯರ್ಥಿ ಮಿಥುನ್ ರೈ ಅವರ ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಎ. 7ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.


ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ರವರು ಸುಳ್ಯದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಸಂಜೆ ೪ ಗಂಟೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. ಸುಮಾರು ೧೫೦೦೦ದಷ್ಟು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಅವರು ತಿಳಿಸಿದರು.
ಅಭ್ಯರ್ಥಿ ಮಿಥುನ್ ರೈಯವರು ಎಪ್ರಿಲ್ ೭ರಂದು ಸುಳ್ಯ ತಾಲೂಕಿನ ವಿವಿಧ ಕಡೆ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಎ. ೬ರಂದು ರಾತ್ರಿ ಬಳ್ಪಕ್ಕೆ ಆಗಮಿಸುವ ಅವರು ಸಂಸದರ ಆದರ್ಶ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್, ಜಿ.ಪಂ. ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆಪಿಸಿಸಿ ಸದಸ್ಯರಾದ ಭರತ್ ಮುಂಡೋಡಿ, ಎಂ. ವೆಂಕಪ್ಪ ಗೌಡ, ಟಿ.ಎಂ.ಶಹೀದ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಸುಳ್ಯ ತಾಲೂಕು ಅಧ್ಯಕ್ಷ ದಯಾಕರ ಆಳ್ವ, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ಗಣೇಶ್ ಕೈಕುರೆ, ಸುಧೀರ್ ಶೆಟ್ಟಿ ಬಿಳಿನೆಲೆ, ಎಸ್.ಸಂಶುದ್ದೀನ್, ಪಿ.ಎಸ್.ಗಂಗಾಧರ್, ಕೆ.ಗೋಕುಲ್‌ದಾಸ್, ಸಿದ್ದಿಕ್ ಕೊಕ್ಕೋ, ಗೀತಾ ಕೋಲ್ಚಾರ್, ಜೆಡಿಎಸ್ ಮುಖಂಡ ಇಕ್ಬಾಲ್ ಎಲಿಮಲೆ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.