Breaking News

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ತಾಂತ್ರಿಕ ಸಮ್ಮೇಳನ

Advt_Headding_Middle
Advt_Headding_Middle

ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2019ರ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ತಾಂತ್ರಿಕ ಸಮ್ಮೇಳನವು ಎ. 9ರಂದು ಉದ್ಘಾಟನೆಗೊಂಡಿತು.
ಈ ತಾಂತ್ರಿಕ ಉತ್ಸವದ ಸಲುವಾಗಿ “ತಂತ್ರಜ್ಞ’ ೧೯ ಎಂಬ ಶೀರ್ಷಿಕೆಯ ಅಡಿಯಲ್ಲಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳಿಗೆ ಮತ್ತು ವಿಷನ್ “19′ ಎಂಬ ಶೀರ್ಷಿಕೆಯ ಅಡಿಯಲ್ಲಿ ಇಂಜಿನಿಯರಿಂಗ್ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿವಿಧ ತಾಂತ್ರಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆ ಇದರ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಟಿ., ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಎನ್.ಎ.ಜ್ಞಾನೇಶ್ ವಹಿಸಿದ್ದರು. ಉಪ ಪ್ರಾಂಶುಪಾಲ ಪೋ.ದೇವಿದಾಸ್ ವೇದಿಕೆಯಲ್ಲಿದ್ದರು. ವಿವಿಧ ಇಂಜಿನಿಯರಿಂಗ್ ಕಾಲೇಜಿನ ಎಲ್ಲಾ ವಿಭಾಗದ ಸುಮಾರು 200 ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಂಡು ವಿವಿಧ ತಾಂತ್ರಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. . ಸಮ್ಮೇಳನ ಸಂಯೋಜಕ ಡಾ. ಜಯವರ್ದನ್ ಎಮ್.ಎಲ್. ಸ್ವಾಗತಿಸಿ, ಡಾ.ಸುನಿಲ್ ಕುಮಾರ್ ಎಮ್ ವಂದಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.