Breaking News

ನಾಳೆ ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರಿಂದ ಬೃಹತ್‌ ರೋಡ್ ಶೋ

Advt_Headding_Middle
Advt_Headding_Middle


ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಎ.15ರಂದು ಬೆಳಿಗ್ಗೆ ಸುಳ್ಯದಲ್ಲಿ ಬೃಹತ್ ರೋಡ್ ಶೋ ಮೂಲಕ ಮತಯಾಚಿಸಲಿದ್ದಾರೆ.
ಬೆಳಿಗ್ಗೆ 10-00 ಗಂಟೆಗೆ ಸುಳ್ಯದ ಲಾಲ್ ಬಹಾದ್ದೂರ್ ಶಾಸ್ತ್ರಿ ವೃತ್ತದಿಂದ ಪ್ರಾರಂಭಗೊಳ್ಳಲಿರುವ ರೋಡ್ ಶೋ ಸುಳ್ಯ ನಗರದಲ್ಲಿ ಸಾಗಿ ಬಳಿಕ ಖಾಸಗಿ ಬಸ್ ನಿಲ್ದಾಣದ ಬಳಿ ಸಮಾರೋಪಗೊಳ್ಳಲಿದೆ.
ರೋಡ್ ಶೋ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ಸುಳ್ಯ ಶಾಸಕ ಎಸ್.ಅಂಗಾರ ಸೇರಿದಂತೆ ಜಿಲ್ಲಾ ಬಿಜೆಪಿ ಮುಖಂಡರು, ತಾಲೂಕು ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.