Breaking News

ಹಿರಿಯ ಸಹಕಾರಿ, ಬಿಜೆಪಿ ಮಾಜಿ ಮಂಡಲಾಧ್ಯಕ್ಷ ಎನ್.ಎ.ಸುಂದರ ನಿಧನ

Advt_Headding_Middle
Advt_Headding_Middle
  • ಹಿರಿಯ ಸಹಕಾರಿ ಧುರೀಣ, ಆಲೆಟಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಬಿಜೆಪಿ ಮಾಜಿ ಮಂಡಲಾಧ್ಯಕ್ಷ ಎನ್.ಎ.ಸುಂದರ ರವರು ಅಲ್ಪಕಾಲದ ಅಸೌಖ್ಯದಿಂದ ಸುಳ್ಯ ಕೆ.ವಿ.ಜಿ. ಆಸ್ಪತ್ರೆ ಯಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.
    ರಾಜಕೀಯ, ಸಹಕಾರಿ, ಧಾರ್ಮಿಕ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆಸಲ್ಲಿಸಿದ್ದ ಇವರು, ಇತ್ತೀಚಿನ ದಿನಗಳಲ್ಲಿ ಅಸೌಖ್ಯಕ್ಕೊಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.
    ನಾಳೆ (ಎ.15) ಸುಳ್ಯ ಯುವಜನ ಸಂಯುಕ್ತ ಮಂಡಳಿ ವಠಾರದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ : ಎನ್.ಎ.ಸುಂದರ ರ ಪಾರ್ಥಿವ ಶರೀರವನ್ನು ನಾಳೆ ಬೆಳಗ್ಗೆ ಕೆ.ವಿ.ಜಿ. ಆಸ್ಪತ್ರೆ ಯಿಂದ‌ ಸುಳ್ಯದ ಯುವಜನ ಸಂಯುಕ್ತ ಮಂಡಳಿಗೆ ತರಲಾಗುವುದು. ಬಳಿಕ ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಬಳಿಕ ಆಲೆಟ್ಟಿ ನೆಡ್ಚಿಲ್ ಮನೆಗೆ ಪಾರ್ಥಿವ ಶರೀರವನ್ನು ಕೊಂಡುಹೋಗಿ‌ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.