ಎನ್.ಎ.ಸುಂದರ ನಿಧನದ ಹಿನ್ನಲೆ : ಬಿಜೆಪಿ ರೋಡ್ ಶೋ ರದ್ದು

Advt_Headding_Middle
Advt_Headding_Middle

ಸುಳ್ಯ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಎನ್.ಎ.ಸುಂದರ ರವರು ನಿಧನರಾದ ಹಿನ್ನಲೆಯಲ್ಲಿ ಇಂದು ನಡೆಯಬೇಕಾಗಿದ್ದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ರವರ ರೋಡ್ ಶೋ ರದ್ದುಗೊಳಿಸಲಾಗಿದೆ.
ಹಿರಿಯ ಬಿಜೆಪಿ ನಾಯಕ ಎನ್.ಎ.ಸುಂದರ ರವರು ನಿನ್ನೆ ರಾತ್ರಿ ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು. ಈ ಹಿನ್ನಲೆಯಲ್ಲಿ ಬಿಜೆಪಿ ರೋಡ್ ಶೋವನ್ನು ರದ್ದು ಗೊಳಿಸಿ ಬೆಳಿಗ್ಗೆ ೧೦.೩೦ಕ್ಕೆ ಸುಳ್ಯದ ಬಿಜೆಪಿ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಇತರ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರದ್ಧಾಂಜಲಿ ಕಾರ್ಯಕ್ರಮ ಮುಗಿದ ಬಳಿಕ ಕಟೀಲ್ ಮತ್ತು ಇತರ ನಾಯಕರು, ಕಾರ್ಯಕರ್ತರು ಯುವಜನ ಸಂಯುಕ್ತ ಮಂಡಳಿಯ ವಠಾರಕ್ಕೆ ಹೋಗಿ ಎನ್.ಎ.ಸುಂದರರ ಅಂತಿಮ ದರ್ಶನ ಪಡೆದು ಹಿಂತಿರುಗಲಿದ್ದಾರೆಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.