ಪಂಜ: ಮಕ್ಕಳ ಭಜನಾ ತರಬೇತಿ-ವಿಕಸನ ಶಿಬಿರ ಉದ್ಘಾಟನೆ

Advt_Headding_Middle
Advt_Headding_Middle

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಜಂಟಿ ಆಶ್ರಯದಲ್ಲಿ ೯ನೇ ವರುಷದ ಉಚಿತ ಮಕ್ಕಳ ಭಜನಾ ತರಬೇತಿ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರವು ಎ.22 ರಂದು ಉದ್ಘಾಟನೆ ಗೊಂಡಿತು.

ತೊಂಡಚ್ಚನ್ ಇಂಡಸ್ಟ್ರಿಸ್ ಮಾಲಕ ಮನು ಎಂ. ಉದ್ಘಾಟಿಸಿದರು. ಶ್ರೀ ಶಾರದಾಂಬಾ ಭಜನಾ ಮಂಡಳಿ ಉಪಾಧ್ಯಕ್ಷ ಪರಮೇಶ್ವರ ಬಿಳಿಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿ ಅಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಆರಾಧನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಕುದ್ವ, , ಪಂಜ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವಲಯ ಮೇಲ್ವಿಚಾರಕಿ ಭಾಗೀರಥಿ, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ , ವಿಶ್ವನಾಥ ಸಂಪ, ವನಿತಾ ಸಮಾಜದ ಕಾರ್ಯದರ್ಶಿ ಹೇಮಲತಾ ಜನಾರ್ಧನ, ತರಬೇತುದಾರರಾದ ನಳಿನಿ ವಿ ಆಚಾರ್ಯ, ಶೃದ್ಧಾಲಕ್ಷ್ಮೀ ಕೆಮ್ಮೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ‍್ಯಕ್ರಮದಲ್ಲಿ ಲೋಕೇಶ್ ಬರೆಮೇಲು ಸ್ವಾಗತಿಸಿದರು.ತೀರ್ಥಾನಂದ ಕೊಡೆಂಕರಿ ನಿರೂಪಿಸಿದರು. ಜಗದೀಶ್ ಮಠ ವಂದಿಸಿದರು.
ಎ.೨೭ ರಂದು ಸಮಾರೋ :ಎ.೨೭ ರಂದು ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀಧಾಮ ಮಣಿಲದ ಸ್ವಾಮೀಜಿ ಪರಮಪೂಜ್ಯ ಶ್ರೀ ಮೋಹನದಾಸ್ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮವನ್ನು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ರಾಜ್ಯ ಪರಿಷತ್ ಕಾರ್ಯದರ್ಶಿ ಮತ್ತು ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಶ್ರೇಯಂಸ್‌ಕುಮಾರ್ ಶೆಟ್ಟಿಮೂಲೆ, ಪಂಜ ಪ್ರಾ.ಕೃ.ಪ.ಸ ಸಂಘದ ಉಪಾಧ್ಯಕ್ಷ ಲೋಕೇಶ್ ಬರೆಮೇಲು, ಪಂಜ ಗ್ರಾ.ಪ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣೆಯಾನ, ಪಂಜ ಪ್ರಾ.ಕೃ.ಪ.ಸ.ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ನೇಮಿರಾಜ್ ಪಲ್ಲೋಡಿ, ಪಂಜ ಜೇಸಿಐ ಪಂಚಶ್ರೀಯ ಪೂರ್ವಾಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ಉಪಸ್ಥಿತರಿರುವರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.