ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Advt_Headding_Middle
Advt_Headding_Middle

ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎ. 23 ರಿಂದ ಎ. 24 ರವರೆಗೆ ಶ್ರೀ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಕ್ಷೇತ್ರ ಪಾಲಿನಿ ಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.


ಎ. 23 ರಂದು ಪೂ. ದುರ್ಗಾಹವನ, ಉಗ್ರಾಣ ತುಂಬಿಸುವುದು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 8 ಗಂಟೆಗೆ ಮಹಾಪೂಜೆ, 9 ಕ್ಕೆ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ, ಕಟ್ಟೆಪೂಜೆ ನಡೆಯಿತು. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅರ್ಧ ಏಕಾಹ ಭಜನೆ ನಡೆಯಿತು.
ಎ. 24 ರಂದು ಪೂ. ಗಣಪತಿ ಹವನ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಶ್ರೀ ಕ್ಷೇತ್ರದ ದೈವಗಳ ಭಂಡಾರ ತೆಗೆಯುವುದು, ಶ್ರೀ ಕ್ಷೇತ್ರದ ದೈವಗಳ ನೇಮೋತ್ಸವ ನಡೆದು, ರಾ. 9ರಿಂದ ಶ್ರೀ ರುದ್ರಚಾಮುಂಡಿ ಅಮ್ಮನವರ ನೇಮೋತ್ಸವ ಹಾಗೂ ಪ್ರಸಾದ ವಿತರಣೆ, ರಾ. ಗಂ. 1 ರಿಂದ ಶ್ರೀ ವರ್ಣಾರ ಪಂಜುರ್ಲಿ, ಪುರುಷ ದೈವಗಳ ನೇಮ ನಡೆಯಿತು. ಪ್ರಾತಃಕಾಲ ಕುಪ್ಪೆ ಪಂಜುರ್ಲಿ, ಭೂಮಿಗುಳಿಗ, ರಾಹು ಗುಳಿಗ ದೈವಗಳ ನೇಮೋತ್ಸವ ನಡೆಯಿತು. ಊರ ಹಾಗೂ ಪರವೂರ ಭಕ್ತಾದಿಗಳು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.