HomePage_Banner
HomePage_Banner

ಜನರಿಂದ ವಂತಿಗೆ ಪಡೆದಾದರೂ ನೆಟ್‌ವರ್ಕ್ ಸಮಸ್ಯೆ ಪರಿಹರಿಸಿ : ತಾಲೂಕು ಪಂಚಾಯತ್ ಸಭೆಯಲ್ಲಿ ಆಗ್ರಹ

ತಾಲೂಕಿನಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇನ್ನುಮುಂದೆ ಜನರಿಂದ ವಂತಿಗೆ ಪಡೆದಾದರೂ ನೆಟ್‌ವರ್ಕ್ ಸಮಸ್ಯೆ ಪರಿಹರಿಸಿ ಎಂದು ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸೂಚನೆ ನೀಡಿದ್ದಾರೆ.
ಅವರು ಮಂಗಳವಾರ ನಡೆದ ಸುಳ್ಯ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮೇಲಿನ ವಿಷಯವನ್ನು ತಾಲೂಕು ಪಂಚಾಯಿತಿ ಸದಸ್ಯ ಅಶೋಕ್ ನೆಕ್ರಾಜೆ ಪ್ರಸ್ತಾಪಿಸಿ, ತಾಲೂಕಿನಾದ್ಯಂತ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆಯಿಂದ ಗ್ರಾಮ ಪಂಚಾಯಿತಿಗಳಲ್ಲಿ, ಸರಕಾರಿ ಕಚೇರಿಗಳಲ್ಲಿ ಸರಕಾರದ ಯೋಜನೆಗಳು ಕಾರ್ಯಗತವಾಗುತ್ತಿಲ್ಲ. ಇದರಿಂದ ಜನಸಾಮಾನ್ಯರು ತತ್ತರಿಸಿ ಹೋಗಿ 70 ವರ್ಷಗಳ ಹಿಂದಿನ ಕಾಲಕ್ಕೆ ತಲುಪಿದ್ದೇವೆ. ಗಂಭೀರತೆ ಪಡೆದ ಸಮಸ್ಯೆಯಿಂದ ಬಿಎಸ್‌ಎನ್‌ಎಲ್ ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಇಂದು ಅಧಿಕಾರಿಗಳ ಸಂಬಳಕ್ಕೂ ಕತ್ತರಿ ಬೀಳುವ ಸಂದರ್ಭ ಬಂದಿದೆ. ಒಂದು ಕಾಲದಲ್ಲಿ ಬಿಎಸ್‌ಎನ್‌ಎಲ್ ಅಧಿಕಾರಿಗಳು ನೆಟ್‌ವರ್ಕ ನೀಡಲು ಜನರ ಜೀವನದಲ್ಲಿ ಚಲ್ಲಾಟ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮಾತನಾಡಿ, ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆಯಿಂದ ಜನಸಾಮಾನ್ಯರು ಸಾಯಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದಾಗ, ಟೆಕ್ನಿಕಲ್ ಸಮಸ್ಯೆಗಳನ್ನು ಸರಿಪಡಿಸುತ್ತೇವೆ. ಸಂಪೂರ್ಣ ಸಮಸ್ಯೆಗಳನ್ನು ಬಗೆ ಹರಿಸಲು ಪಂಡ್ ಇಲ್ಲ ಎಂದು ದೂರ ಸಂಪರ್ಕ ಕೇಂದ್ರದ ಅಧಿಕಾರಿಗಳು ಉತ್ತರಿಸಿದಾಗ, ನೀವು ಕಥೆ ಹೇಳುವುದು ಬೇಡ. ನಾಳೆಯಿಂದಲೇ ಸಮಸ್ಯೆಯನ್ನು ಬಗೆಹರಿಸಿ, ಪಂಡ್ ಇಲ್ಲದಿದ್ದರೆ ಜನಸಾಮಾನ್ಯರಿಂದ ವಂತಿಗೆ ಪಡೆದು ನೆಟ್‌ವರ್ಕ್ ಸರಿಪಡಿಸಿ. ಅಲ್ಲದೆ ಸಮಸ್ಯೆಗಳ ಬಗ್ಗೆ ತಾಲೂಕು ಪಂಚಾಯಿತಿಗೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.