HomePage_Banner
HomePage_Banner
Breaking News

ತಾ.ಪಂ. ಉಪಾಧ್ಯಕ್ಷರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ : ತಾ.ಪಂ. ಸಭೆಯಲ್ಲಿ ಚರ್ಚೆ

ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಶುಭದಾ ಎಸ್.ರೈ ಮೇಲೆ ಮಾನಹಾನಿಕಾರಕ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದವರ ಮೇಲೆ ಮತ್ತು ಭಿತ್ತಿಪತ್ರ, ಕರಪತ್ರಗಳ ಮೂಲಕ ಅಪಪ್ರಚಾರ ಮಾಡಿದವರ ಮೇಲೆ ಪೊಲೀಸ್ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಎಂದು ಸುಳ್ಯ ತಾ.ಪಂ. ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪ್ರಶ್ನಿಸಿದರು.
ಪ್ರಭಾವಿಗಳ ಒತ್ತಡಕ್ಕೆ ಮಣಿದು ಕ್ರಮಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು. ಈ ಕುರಿತು ಚರ್ಚೆ ನಡೆದು ಒಂದು ವಾರದಲ್ಲಿ ತನಿಖೆ ವರದಿಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷರಿಗೆ ಸಲ್ಲಿಸಲು ಮತ್ತು ಅಪಪ್ರಚಾರ ಮಾಡಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.
ಇದೇ ವೇಳೆ ಎಸ್‌ಐ ಹರೀಶ್ ಉತ್ತರಿಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.