HomePage_Banner
HomePage_Banner
Breaking News

ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣ ಪತ್ತೆ-ಜ್ವರ ಬಂದರೆ ವೈದ್ಯರನ್ನು ಭೇಟಿಯಾಗಲು ತಾ| ವೈದ್ಯಾಧಿಕಾರಿ ವಿನಂತಿ

ತಾಲೂಕಿನಲ್ಲಿ ಕೆಲವು ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು, ತಾಲೂಕಿನಲ್ಲಿ  5ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ.
ಸುಳ್ಯ ತಾಲೂಕು ಆಸ್ಪತ್ರೆ ಸೇರಿದಂತೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಾಖಲಾಗುವ ಜ್ವರ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚಾಗುತ್ತಿದೆ. ಇವರಲ್ಲಿ ಹಲವರಿಗೆ ಶಂಕಿತ ಡೆಂಗ್ಯೂ ಇರುವುದು ದೃಢಪಟ್ಟಿದ್ದು ಆ ನಿಟ್ಟಿನಲ್ಲಿ ಜ್ವರ ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ತಿಂಗಳಿನಲ್ಲಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಲ್ಕೂವರೆ ಸಾವಿರಕ್ಕೂ ಅಧಿಕ ರೋಗಿಗಳು ಬಂದು ಚಿಕಿತ್ಸೆ ಪಡೆದಿದ್ದಾರೆ. ಇದರಲ್ಲಿ ಜ್ವರ ಪೀಡಿತರು ಅಧಿಕವಾಗಿದ್ದು ಬೆಳ್ಳಾರೆ, ಅರಂತೋಡು, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಜ್ವರ ಪೀಡಿತರ ಸಂಖ್ಯೆ ಹೆಚ್ಚಾಗಿದೆ. ಖಾಸಗಿ ಆಸ್ಪತ್ರೆಯಲ್ಲಿಯೂ ಜ್ವರ ಪೀಡಿತರ ಬಂದು ಔಷಧಿ ಪಡೆದು ಹೋಗುತ್ತಿದ್ದಾರೆ.
ಡೆಂಗ್ಯು ಜ್ವರ ?
ಡೆಂಗ್ಯು ಜ್ವರ ವೈರಸ್‌ನಿಂದ ಉಂಟಾಗುವ ಖಾಯಿಲೆ. ಇದು ಸೋಂಕು ಹೊಂದಿದ ‘ಈಡಿಸ್ ಈಜಿಪ್ಟೈ’ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ.
ರೋಗದ ಲಕ್ಷಣ ?
ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆ ನೋವು, ಕಣ್ಣುಗಳ ಹಿಂಬಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ಈ ರೋಗದ ಪ್ರಮುಖ ಲಕ್ಷಣ. ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತದೆ.
ರೋಗಕ್ಕೆ ಚಿಕಿತ್ಸೆ ?
ಡೆಂಗ್ಯು ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲ. ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಸರಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆಯಬಹುದಾಗಿದೆ.
ರೋಗದ ನಿಯಂತ್ರಣ ? : ಸೊಳ್ಳೆಗಳ ನಿಯಂತ್ರಣ ಒಂದೇ ಡೆಂಗ್ಯು ರೋಗದ ಹತೋಟಿಗೆ ಮುಖ್ಯ ವಿಧಾನ. ಈ ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲುಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ಮು, ಬ್ಯಾರೆಲ್, ಮಣ್ಣಿನ ಮಡಿಕೆ, ಉಪಯೋಗಿಸಿದ ಒರಳುಕಲ್ಲು, ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಈ ರೀತಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.
5ಡೆಂಗ್ಯೂ ಪ್ರಕರಣ
ತಾಲೂಕಿನಲ್ಲಿ 5 ಡೆಂಗ್ಯೂ ಪ್ರಕರಣ ಪತ್ತೆಯಾಗಿರುವ ಬಗ್ಗೆ ತಾಲೂಕಿ ವೈದ್ಯಾಧಿಕಾರಿಗಳು ದೃಢ ಪಡಿಸಿದ್ದಾರೆ. ನಾವು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಮಾಹಿತಿಯನ್ನು ಪಡೆದುಕೊಂಡಿದ್ದು ಜ್ವರ ಎಂದು ಔಷಧಿ ಪಡೆಯುವವರು ಹೆಚ್ಚಿದ್ದಾರೆ. ಅವರಲ್ಲಿ ಡೆಂಗ್ಯೂ ಪ್ರಕರಣ ನೆಲ್ಲೂರು ಕೆಮ್ರಾಜೆ ಭಾಗದಿಂದ 1, ಪಂಜ – ಬಳ್ಪದಲ್ಲಿ 2, ಗುತ್ತಿಗಾರು 2ಹೀಗೆ ಪ್ರಕರಣ ದೃಢ ಪಟ್ಟಿದೆ. ಅವರು ಔಷಧಿ ಪಡೆದು ಗುಣಮುಖರಾಗಿದ್ದಾರೆ. ಆದರೆ ಇನ್ನೂ ಹಲವರಲ್ಲಿ ಶಂಕಿತ ಡೆಂಗ್ಯೂ ಪ್ರಕಣ ಇದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ| ಸುಬ್ರಹ್ಮಣ್ಯರು ಮಾಹಿತಿ ನೀಡಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.