HomePage_Banner
HomePage_Banner
Breaking News

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್‍ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್‍ಯಕ್ರಮವು ಜು.13ರಂದು ನಡೆಯಿತು.
ಪ್ರಥಮ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ ಪದವಿ ತರಗತಿಗಳಿಗೆ ದಾಖಲಾದ ವಿದ್ಯಾರ್ಥಿಗಳನ್ನು ದ್ವಿತೀಯ ಹಾಗೂ ತೃತೀಯ ಪದವಿ ವಿದ್ಯಾರ್ಥಿಗಳು ಪುಷ್ಪಗಳನ್ನು ಅರ್ಚಿಸಿ ಕಾಲೇಜಿಗೆ ಬರಮಾಡಿಕೊಂಡರು. ನಂತರ ನಡೆದ ಸಭಾ ಕಾರ್‍ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಅಚ್ಯುತ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿ, ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತೀಶ್ ಕುಮಾರ್ ಕೆ.ಆರ್, ಉಪನ್ಯಾಸಕರುಗಳಾದ ರಾಮಚಂದ್ರ ಡಿ, ಉದಯಶಂಕರ್ ಹೆಚ್, ಶ್ರೀಮತಿ ಗಾಯತ್ರಿ, ಕುಮಾರಿ ಲತಾ ಮೊದಲಾದವರು ಉಪಸ್ಥಿತರಿದ್ದರು. ಸಭಾ ಕಾರ್‍ಯಕ್ರಮದಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಅಶ್ವಿನಿ ಸ್ವಾಗತಿಸಿ, ಅಂತಿಮ ಬಿ.ಎಸ್ಸಿ ಜಶ್ಮಿ ವಂದಿಸಿದರು. ಅಂತಿಮ ಬಿ.ಎಸ್ಸಿ ತನುಶ್ರಿ ಕಾರ್‍ಯಕ್ರಮ ನಿರೂಪಿಸಿದರು.
ನಂತರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮನೋರಂಜನಾ ಆಟೋಟಗಳನ್ನು ಏರ್ಪಡಿಸಲಾಯಿತು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.