HomePage_Banner
HomePage_Banner
HomePage_Banner
HomePage_Banner
Breaking News

ಎನ್ನೆಂಸಿ: ಪದವಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ ರೆಡ್‌ಕ್ರಾಸ್ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ 2018-19 ನೇ ಸಾಲಿನ ಪದವಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ ರೆಡ್‌ಕ್ರಾಸ್ ಸದಸ್ಯರನ್ನು ಅಭಿನಂದಿಸುವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಎರಡು ವರ್ಷಗಳ ಕಾಲ ಕಾಲೇಜು ಯುವ ರೆಡ್‌ಕ್ರಾಸ್ ಸಂಸ್ಥೆಯ ಸದಸ್ಯರಾಗಿದ್ದು ಇದೀಗ ಅಂತಿಮ ಪದವಿಯನ್ನು ಅತ್ಯುನ್ನತ ಶ್ರೇಣಿಯಲ್ಲಿ ಪೂರೈಸಿರುವ ೨೩ ಸದಸ್ಯರನ್ನು ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ಅಭಿನಂದಿಸಲಾಯಿತು. ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಕೆ. ಗಿರಿಧರ ಗೌಡ ಅಭಿನಂದಿಸಿ ಮಾತನಾಡಿ, ಪಠ್ಯೇತರ ಚಟುವಟಿಕೆಯಲ್ಲಿದ್ದುಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡಿದವರನ್ನು ಈ ರೀತಿ ಗುರುತಿಸುವಂತದು ಶ್ಲಾಘನೀಯ ಕೆಲಸ, ಮಾತ್ರವಲ್ಲದೇ ಇದು ಮುಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆ ಎಂದರು.


ಸುಳ್ಯ ಆರಕ್ಷಕ ಠಾಣೆಯ ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ,ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಉದಯಕೃಷ್ಣ ಬಿ.,ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಸಂತೋಷ್‌ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಾಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯನ್ನು ಸರಿದೂಗಿಸಿಕೊಂಡಾಗಲೇ ವಿದ್ಯಾರ್ಥಿ ಪರಿಪೂರ್ಣ. ಹಾಗಾಗಿ ಹಿರಿಯ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸುವ ಹಾಗೂ ಕಿರಿಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿಎನ್ನುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ಎಂದರು. ಅಭಿನಂದನೆ ಸ್ವೀಕರಿಸಿದ ಸದಸ್ಯರ ಪರವಾಗಿ ಹರ್ಷಿತಾ ಕೆ ಎಂ ಅನಿಸಿಕೆ ವ್ಯಕ್ತಪಡಿಸಿದರು.
ಘಟಕ ನಾಯಕರುಗಳಾದ ನಾಯಕರುಗಳಾದ ಭುವನ್ ಪಿ, ಕುಮುದಾ ಬಿ ಎಸ್,ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ರತ್ನಾವತಿ ಡಿ. ಹಾಗೂ ಹಿರಿಯ ರೆಡ್‌ಕ್ರಾಸ್ ಸದಸ್ಯರು ಉಪಸ್ಥಿತರಿದ್ದರು.
ತೇಜಸ್ವಿನಿ, ಮೌನ, ಸಿಂಚನಾ ಪಿ. ಎಂ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಪಲ್ಲವಿ ಸ್ವಾಗತಿಸಿ ಮೌನವಂದಿಸಿದರು. ಜಯಮಾಲಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.