HomePage_Banner
HomePage_Banner
HomePage_Banner
Breaking News

ಗಾಂಧಿನಗರ ಪಬ್ಲಿಕ್ ಸ್ಕೂಲ್‌ನಲ್ಲಿ ಕ್ಷಯ ರೋಗದ ಬಗ್ಗೆ ಅರಿವು ಕಾರ್ಯಕ್ರಮ

ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಜು.  16 ರಂದು ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯವರು ನಡೆಸಿಕೊಟ್ಟರು.

 

ಸುಳ್ಯ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕರವರು ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ನಗರ ಪಂಚಾಯತ್ ಸದಸ್ಯೆ ಪ್ರವಿತ ಪ್ರಶಾಂತ್ ವಹಿಸಿದ್ದರು.


ಡಾ. ಸುಬ್ರಹ್ಮಣ್ಯರವರು ಪ್ರಾಸ್ತಾವಿಕವಾಗಿ ಮಾತನಾಡಿ, ಟ. ಬಿ. ಕಾಯಿಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದರು. ಮಹೇಶರವರು ರೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಪಬ್ಲಿಕ್ ಸ್ಕೂಲ್‌ನ ಉಪಪ್ರಾಂಶುಪಾಲೆ ಶ್ರೀಮತಿ ನಳಿನಿಯವರು ತಮ್ಮ ನೆರೆಕರೆಯಲ್ಲಿ ರೋಗದ ಲಕ್ಷಣ ಇರುವ ವ್ಯಕ್ತಿ ವಿದ್ಯಾರ್ಥಿಗಳಿಗೆ ಕಂಡುಬಂದಲ್ಲಿ ಮಾಹಿತಿ ನೀಡಲು ಹೇಳಿದರು. ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಸದಸ್ಯ ಸದಸ್ಯ ಶರೀಫ್ ಕಂಠಿ, ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಪ್ರವೀಣ್ ನಾಯಕ್ ಉಪಸ್ಥಿತರಿದ್ದರು. ಅರುಣ ಕುಮಾರ್ ರವರು ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.