HomePage_Banner
HomePage_Banner
HomePage_Banner
Breaking News

ಕನಕಮಜಲು: ಮಕ್ಕಳ ಚಲನಚಿತ್ರೋತ್ಸವ ಪ್ರದರ್ಶನ

ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು, ಕನಕಮಜಲು ಯುವಕ ಮಂಡಲ ಇದರ ಆಶ್ರಯದಲ್ಲಿ ಮಕ್ಕಳ ಚಲನಚಿತ್ರೋತ್ಸವ ಕಾರ್ಯಕ್ರಮ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಖ್ಯಾತಿಯ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರೊಂದಿಗೆ ಸಂವಾದ ಕಾರ್ಯಕ್ರಮವು ಕನಕಮಜಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದಲ್ಲಿ ಜು.೨೦ರಂದು ನಡೆಯಿತು.
ಕಾರ್ಯಕ್ರಮವನ್ನು ನಿರ್ದೇಶಕ ರಿಷಬ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಸುಳ್ಯ ಭಟ್ ಅಸೋಸಿಯೇಟ್ ನ ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸತೀಶ್ ಕೆಮನಬಳ್ಳಿ, ವಿಶೇಷ ಆಹ್ವಾನಿತರುಗಳಾಗಿ ರಂಜನ್ (ಪ್ರವೀಣ), ಸಪ್ತ ನಾವೂರು (ಪಲ್ಲವಿ), ಸನಿಲ್‌ಗುರು (ರಾಘು) ಉಪಸ್ಥಿತರಿದ್ದರು. ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ ಹಾಗೂ ಕಾರ್ಯದರ್ಶಿ ಬಾಲಚಂದ್ರ ನೆಡಿಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.