ವಿದ್ಯಾರ್ಥಿಗಳನ್ನು ಸಿದ್ಧಪಡಿಸುವ ಕೆಲಸ ಶಿಕ್ಷಣ ಸಂಸ್ಥೆಗಳಿಂದಾಗಬೇಕು : ಡಾ. ಕೆ ಚಿನ್ನಪ್ಪ ಗೌಡ

Advt_Headding_Middle
Advt_Headding_Middle

ವಿದ್ಯಾರ್ಥಿಗಳು ಸಿದ್ಧವಿದ್ದುದನ್ನು ಬಳಸಿಕೊಳ್ಳುವುದಲ್ಲ, ಅವರನ್ನು ಸಿದ್ಧ ಪಡಿಸುವ ಕೆಲಸ ಶಿಕ್ಷಣ ಸಂಸ್ಥೆಗಳಿಂದಾಗಬೇಕು. ಅದಕ್ಕಾಗಿ ಅಲ್ಲಿರುವ ಅಧ್ಯಾಪಕರು ವಿದ್ಯಾರ್ಥಿಗಳು ಆಸಕ್ತಿಯಿಂದ, ಬದ್ಧತೆಯಿಂದ, ಲವಲವಿಕೆಯಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು, ಆಧುನಿಕತೆಗೆ ಸರಿಯಾಗಿ ಎಲ್ಲರೂ ತೆರೆದುಕೊಳ್ಳಬೇಕು ಎಂದು ಹಾವೇರಿ ಜಾನಪದ ವಿಶ್ವ ವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಡಾ. ಕೆ ಚಿನ್ನಪ್ಪ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ೨೦೧೯-೨೦ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡುತ್ತಾ, ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಮಾನವಾಗಿ ಮತ್ತು ಅತ್ಯುತ್ತಮ ರೀತಿಯಲ್ಲಿ ಸಿಗಬೇಕು. ಶಿಕ್ಷಣ ಸಂಸ್ಥೆ ಯಾವ ಉದ್ದೇಶದಿಂದ ಬಂದಿದೆಯೋ ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು.
ಅದಕ್ಕಾಗಿ ಮೊದಲು ತಮ್ಮ ದಾರಿ ಯಾವುದು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು, ತನ್ನ ಆತ್ಮಪ್ರಜ್ಞೆಯ ಕಡೆ ಗಮನ ಕೊಡಬೇಕು. ಯಾವ ವ್ಯಕ್ತಿ ಮತ್ತು ಸಮಾಜದಲ್ಲಿ ಆತ್ಮಪ್ರಜ್ಞೆ ಎಂಬುದು ಇಲ್ಲವೋ ಅದು ಅತ್ಯಂತ ಅಪಾಯಕಾರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ), ಸುಳ್ಯ ಇದರ ಅಧ್ಯಕ್ಷ ಡಾ. ಕೆ ವಿ ಚಿದಾನಂದರು ಮಾತನಾಡಿ, ಶಿಕ್ಷಣ ಸಂಸ್ಥೆಗಳ ಸ್ಥಾಪನೆಯೊಂದಿಗೆ ಊರಿನ ಅಭಿವೃದ್ಧಿ ಸಾಧ್ಯ ಎಂದು ಮನಗಂಡವರು ಕೆವಿಜಿಯವರು. ಆ ನಿಟ್ಟಿನಲ್ಲಿ ಇಂದು ಇಷ್ಟೆಲ್ಲಾ ವಿದ್ಯಾ ಸಂಸ್ಥೆಗಳು ಸುಳ್ಯದಲ್ಲಿ ತಲೆ ಎತ್ತಿವೆ. ವಿದ್ಯೆ ಎನ್ನುವುದಕ್ಕೆ ಕೊನೆಯೆಂಬುದಿಲ್ಲ, ಆದರೆ ಪಡೆದ ವಿದ್ಯೆಯನ್ನು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಭವಾನಿಶಂಕರ ಅಡ್ತಲೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಗಿರಿಧರ ಗೌಡ ಕೆ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಕೆ ಪೂವಪ್ಪ ಗೌಡ ವಿದ್ಯಾರ್ಥಿ ಪದಾಧಿಕಾರಿಗಳಿಗೆ, ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಕೃಷ್ಣಪ್ರಸಾದ್ ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ತನ್ನ ಅನಿಸಿಕೆ ವ್ಯಕ್ತಪಡಿಸಿದರು. ಆರಂಭದಲ್ಲಿ ಸ್ಮಿತಾ ಎಂ, ಸಿಂಚನಾ, ಜೋತ್ಸ್ನಾ, ರಚನಾ, ರಕ್ಷಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಪೂನಂ ಕಾರ್ಯಪ್ಪ ಶುಭ ಸಂದೇಶ ವಾಚಿಸಿ, ಜತೆ ಕಾರ್ಯದರ್ಶಿ ಲೋಹಿತ್ ಬಿ ಎ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಕೊಡಮಾಡಲ್ಪಟ್ಟ ಧನ ಸಹಾಯದ ಪಟ್ಟಿಯನ್ನು ಪ್ರಸ್ತುತಪಡಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಮಮತಾ ಕೆ ಅತಿಥಿಗಳನ್ನು ಪರಿಚಯಿಸಿ, ಕಾರ್ಯದರ್ಶಿ ಮೋನಿಷಾ ಕೆ ಎಂ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಪ್ರೇಮಿತಾ ಬಿ ಜೆ ಹಾಗೂ ದಿಯಾ ಮರಿಯಮ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.