ಸುಳ್ಯ ತಾಲೂಕು ಹಾಲು ಉತ್ಪಾದಕರ ಸಂಘದ ಸಮಾಲೋಚನಾ ಸಭೆ

Advt_Headding_Middle
Advt_Headding_Middle

ಸುಳ್ಯ ತಾಲೂಕಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮತ್ತು ದಕ ಹಾಲು ಉತ್ಪಾದಕರ ಒಕ್ಕೂಟದ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಜುಲೈ 23 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ದ.ಕ. ಹಾಲು ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅವರು ವಹಿಸಿದ್ದರು. ಬಳಿಕ ಮಾತನಾಡಿದ ಅವರು, ಒಕ್ಕೂಟದ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಎಲ್ಲ ವ್ಯವಹಾರಗಳು ಆನ್‌ಲೈನ್‌ನಲ್ಲಿಯೇ ನಡೆಯಲು ಪೂರ್ವಭಾವಿಯಾಗಿ ತಂತ್ರಾಂಶ ಬರೆಯುವ ಕೆಲಸವೂ ಮುಕ್ತಾಯದ ಹಂತದಲ್ಲಿದ್ದು, ಈ ವ್ಯವಸ್ಥೆ ಬೆಳಕಿಗೆ ಬಂದ ಮೇಲೆ ಸಂಘದವರು ಈವರೆಗೆ ಬಳಸುತ್ತಿದ್ದ ಬೇರೆ ಬೇರೆ ತಂತ್ರಾಂಶದ ಅವಶ್ಯಕತೆ ಇರುವುದಿಲ್ಲ. ಮತ್ತು ತಂತ್ರಾಂಶದ ಸಮಸ್ಯೆಯನ್ನು ಬಗೆಹರಿಸಲು ಸುಲಭವಾಗುತ್ತದೆ ಎಂದು ರವಿರಾಜರು ಹೇಳಿದರು. ಸಭೆಯಲ್ಲಿ ದ.ಕ. ಹಾಲು ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾದ ನಿರಂಜನ ಬಾವಂತಬೆಟ್ಟು, ನಿರ್ದೇಶಕರುಗಳಾದ ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್ ಎಸ್, ಬಿ., ಜಯರಾಮ ರೈ, ಶ್ರೀಮತಿ ಸವಿತಾ ಶೆಟ್ಟಿ, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಿ.ವಿ. ಹೆಗ್ಡೆ, ವ್ಯವಸ್ಥಾಪಕರಾದ ಡಾ. ನಿತ್ಯಾನಂದ ಭಕ್ತ ಮತ್ತು ಉಪ ವ್ಯವಸ್ಥಾಪಕ ಡಾ. ರಾಮಕೃಷ್ಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಉತ್ತಮ ಸಂಘಗಳಲ್ಲಿ ಪಂಜ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಥಮ ಸ್ಥಾನವನ್ನು ದ್ವಿತೀಯ ಸ್ಥಾನವನ್ನು ಕುಕ್ಕುಜಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ ಉತ್ತಮ ಹೈನುಗಾರರಲ್ಲಿ ಶ್ರೀಮತಿ ತನುಜಾ ಚೊಕ್ಕಾಡಿ, ಉತ್ತಮ ಹುಲ್ಲಿನ ತಾಕಿಗೆ ಶ್ರೀಮತಿ ಹೇಮಾವತಿ ದುಗಲಡ್ಕ ಬಹುಮಾನ ಪಡೆದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಮೇನಾಲ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀಮತಿ ಭಾರತಿ ಜಯರಾಮರ ಅಕಾಲಿಕ ಅಗಲುವಿಕೆ ಒಂದು ನಿಮಿಷದ ಮೌನ ಪ್ರಾರ್ಥನೆ ನಡೆಸಲಾಯಿತು. ಅರಂಬೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಶ್ರೀಮತಿ ಸೌಮ್ಯ ಭಾರದ್ವಾಜ್ ಪ್ರಾರ್ಥಿಸಿದರು. ಒಕ್ಕೂಟದ ನಿರ್ದೇಶಕರಾದ ನಾರಾಯಣ ಪ್ರಕಾಶ್ ಸ್ವಾಗತಿಸಿದರು. ಪುತ್ತೂರು ವಲಯದ ಉಪ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್ ವಂದಿಸಿದರು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮತ್ತು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ ಹೈನುಗಾರರ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.