ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

Advt_Headding_Middle
Advt_Headding_Middle

ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಹಾಗೂ ಆಂಗ್ಲ ಭಾಷಾ ವಿಭಾಗದ ಸಹಯೋಗದೊಂದಿಗ ” ವಿದ್ಯಾರ್ಥಿ ಜೀವನದಲ್ಲಿ ಅಧ್ಯಯನದ ಮಹತ್ವ” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಜು. 22ರಂದು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಡಾ.ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆಯ ಸಹಾಯಕ ಪ್ರಾಧ್ಯಾಪಕರಾದ ಕಾಂತರಾಜು ರವರು ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಅಧ್ಯಯನದ ಮಹತ್ವದ ಕುರಿತಾಗಿ ಹಲವಾರು ಸ್ತೋತ್ರ, ಕಥೆಗಳ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಪ್ರಾಂಶುಪಾಲರಾದ ಪ್ರೊ|| ಪದ್ಮನಾಭ.ಕೆ.ರವರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.P ಲೇಜು ಗ್ರಂಥಪಾಲಕರು ಮತ್ತು ಕಾರ್ಯಕ್ರಮದ ಸಂಯೋಜಕರಾದ ಡಾ.ರವಿಚಂದ್ರ ನಾಯ್ಕ ರವರು ಮತ್ತು ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರಾದ ಹನುಮಂತ ಗೌಡ ಡಿ.ಎಮ್.ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಕೇಶ್.ಬಿ.ರವರು ನಿರೂಪಿಸಿದರು. ಡಾ| ರವಿಚಂದ್ರ ನಾಯ್ಕ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಮತ್ತು ರಕ್ಷಿತಾ.ಎಮ್.ರವರು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.