Breaking News

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Advt_Headding_Middle
Advt_Headding_Middle

ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವರ್ಷದ 2019-20  ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜುಲೈ 27 ರಂದು ನಡೆಯಿತು.


ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ ಬೊಮ್ಮೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿ ಸಂಘದ ನಾಯಕರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಭಾಕರ ಗೌಡ ಕಿರಿಭಾಗರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಶಿವರಾಮ ನಾಯ್ಕರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ 2019 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು ೨೨ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಗೌರವಿಸಲಾಯಿತು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸತ್ಯವತಿ ಮತ್ತು ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಮೀರಾ ಅವರು ಸಾಧನೆಗೈದ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ವಿದ್ಯಾರ್ಥಿ ಸಂಘದ ನಾಯಕ ಚಿತ್ತಾರ ಮತ್ತು ಉಪನಾಯಕ ಕಿಶನ್ ಅವರು ಮಾತನಾಡಿ ವಿದ್ಯಾರ್ಥಿಗಳ ಸಹಕಾರವನ್ನು ಯಾಚಿಸಿದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಯಶೋಧ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಶ್ರೀಮತಿ ಇಂದಿರಾ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ್ ತೋಳ್ಪಾಡಿಯವರು ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.