ತನುಜ ಚೊಕ್ಕಾಡಿಯವರಿಗೆ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಪುರಸ್ಕಾರ

Advt_Headding_Middle
Advt_Headding_Middle

ಆಧುನಿಕ ರೀತಿಯಲ್ಲಿ ಹೈನುಗಾರಿಕೆಯನ್ನು ಮಾಡುತ್ತಿರುವ ಶ್ರೀಮತಿ ತನುಜ ದೊಡ್ಡಿಹಿತ್ಲು, ಸುಬ್ಬಯ್ಯಮೂಲೆಯವರಿಗೆ
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಜು.23ರಂದು ಸುಳ್ಯದ ಲಯನ್ಸ್ ಕ್ಲಬ್ ಹಾಲ್ ನಲ್ಲಿ ನಡೆದ ಒಕ್ಕೂಟದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಪುರಸ್ಕಾರವು ಸನ್ಮಾನ ಪತ್ರವನ್ನು ಒಳಗೊಂಡಿದೆ. ಶ್ರೀಮತಿ ತನುಜರವರು ಸಾವಯವ ಕೃಷಿ ಮತ್ತು ಹೈನುಗಾರಿಕೆಯಲ್ಲಿ ಕೃಷಿ ಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ದೊಡ್ಡಿಹಿತ್ಲು, ಸುಬ್ಬಯ್ಯಮೂಲೆಯವರ ಧರ್ಮಪತ್ನಿ. ಇವರ ಪುತ್ರಿ ಕು. ಭೂಮಿಕಾ ಡಿ.ಸಿ. ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದು, ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿದ್ದಾರೆ. ಶ್ರೀಮತಿ ತನುಜರವರು ಈ ಹಿಂದೆ ಚೊಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.