HomePage_Banner
HomePage_Banner
Breaking News

ಬೆಳ್ಳಾರೆ : ಡಾ.ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಡೆಂಗ್ಯೂ ಸಾಂಕ್ರಾಮಿಕ ರೋಗ” ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಬೆಳ್ಳಾರೆಯ ಡಾ.ಕೆ.ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ “ಡೆಂಗ್ಯೂ ಸಾಂಕ್ರಾಮಿಕ ರೋಗ” ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಕ್ರಮವು ಜು.30 ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಅಶ್ವತಿ ಆಗಮಿಸಿದ್ದರು. ಮಂಗಳೂರು ಜಿಲ್ಲೆಯಾದ್ಯಂತ ಡೆಂಗ್ಯೂ ಬಾಧಿಸುತ್ತಿದ್ದು, ಅದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ವಹಿಸುವುದು ಅಗತ್ಯ ಎಂದು ತಿಳಿಸಿದರು. ನಿಂತ ನೀರಿನಲ್ಲಿ ಡೆಂಗ್ಯೂ ಸೊಳ್ಳೆಗಳು ಸಂತಾನೋತ್ಪತಿ ಮಾಡುವುದರಿಂದ ಸುತ್ತಲಿನ ಪರಿಸರದಲ್ಲಿ ನೀರು ನಿಂತು ಕೊಳೆಯಿರದ ಹಾಗೆ ಎಚ್ಚರ ವಹಿಸುವುದು ಹಾಗೂ ಸಮುದಾಯದ ಜನರಲ್ಲಿ ತಿಳುವಳಿಕೆ ಮೂಡಿಸುವುದರಿಂದ ಡೆಂಗ್ಯೂವನ್ನು ತಡೆಗಟ್ಟಬಹುದು ಎಂದು ಅಭಿಪ್ರಾಯ ಪಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಅಧ್ಯಕ್ಷತೆ ವಹಿಸಿದ್ದರು. ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ, ಉಪನ್ಯಾಸಕ ವರ್ಗ, ವಿದ್ಯಾರ್ಥಿ ವೃಂದ ಹಾಗೂ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕ ರಂಜಿತ್ ಮತ್ತು ಭವ್ಯಶ್ರೀ ಉಪಸ್ಥಿತರಿದ್ದರು. ಕುಮಾರಿ ಲೇಖನ ನಿರೂಪಣೆ ಮಾಡಿ, ಕುಮಾರಿ ಶಿಲ್ಪಾ ಸ್ವಾಗತಿಸಿ, ಕುಮಾರಿ ರಮ್ಯಾ ವಂದನಾರ್ಪಣೆ ಗೈದರು. ಕಾರ್ಯಕ್ರಮದ ಕೊನೆಯಲ್ಲಿ ನಿಶ್ಚಿತಾ, ಜಯಶ್ರೀ, ಮತ್ತು ನಮ್ರತಾರವರು ಧ್ಯೇಯ ಗೀತೆ ಹಾಡಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.