Breaking News

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Advt_Headding_Middle

 


ಕರ್ನಾಟಕ ಅಂಚೆ ವೃತ್ತವು ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಂಗಳೂರು ವಿಭಾಗದಲ್ಲಿ ೪೩ ಹುದ್ದೆಗಳು, ಪುತ್ತೂರು ವಿಭಾಗದಲ್ಲಿ ೭೧, ಉಡುಪಿ ವಿಭಾಗದಲ್ಲಿ ೭೩ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಆನ್‌ಲೈನ್ ಮೂಲಕ ಎಸ್ಸೆಸ್ಸೆಲ್ಸಿ ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಯಲಿದ್ದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ೧೮ ರಿಂದ ೪೦ ವರ್ಷ ವಯೋಮಿತಿಯವರಾಗಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆ. 4 .  ಎಸ್ಸಿ, ಎಸ್ಟಿ ಹಾಗೂ ಇತರೆ ವರ್ಗಗಳಿಗೆ ಐದು ವರ್ಷಗಳ ವಿನಾಯಿತಿ , ಒಬಿಸಿ, ಹಿಂದುಳಿದ ವರ್ಗಗಳಿಗೆ ಮೂರು ವರ್ಷಗಳ ವಿನಾಯಿತಿ ಇರುತ್ತದೆ. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ನಾಲ್ಕು ಹುದ್ದೆಗಳು ಮೀಸಲಾಗಿರುತ್ತವೆ. ಅಂಗವಿಕಲರಿಗೆ ವಯೋಮಿತಿಯಲ್ಲಿ ೧೦ವರ್ಷಗಳ ಸಡಿಲಿಕೆ ಇರುತ್ತದೆ.

ನೇಮಕಾತಿಗಾಗಿ ಅರ್ಜಿ ಆಹ್ವಾನ ಮಾಡಿರುವ ಎಲ್ಲ ಹುದ್ದೆಗಳಿಗೂ ಎಸ್ಸೆಸ್ಸೆಲ್ಸಿ ಪಾಸಾಗಿರುವುದು ಕಡ್ಡಾಯ. ಪ್ರತಿ ಹುದ್ದೆ ಗೂ ಅರ್ಜಿ ಸಲ್ಲಿಸುವವರು ಕನಿಷ್ಠ ೬೦ ದಿನಗಳ ಕಡ್ಡಾಯ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಶಾಖಾ ಅಂಚೆ ಪಾಲಕರಾಗಿದ್ದಲ್ಲಿ ೨೫ ಸಾವಿರ ಬಾಂಡ್, ಉಪ ಶಾಖಾ ಅಂಚೆ ಪಾಲಕ, ಢಾಕ್ ಸೇವಕರಾಗಿದ್ದಲ್ಲಿ ೧೦ ಸಾವಿರ ಬಾಂಡ್ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಆಸಕ್ತರು ಮಾಹಿತಿಗಾಗಿ ಸ್ಥಳೀಯ ಅಂಚೆ ಕಚೇರಿ ಅಥವಾ ವಿಭಾಗೀಯ ಅಂಚೆ ಕಚೇರಿಯನ್ನು ಸಂಪರ್ಕ ಮಾಡಬಹುದು.

ಮಾಹಿತಿಗಾಗಿ : https://indiapost.gov.in

                      http://appost.in/gdsonline

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.