HomePage_Banner
HomePage_Banner
HomePage_Banner

ಅ.27: ನಳಿನ್ ಕುಮಾರ್ ಅಧಿಕಾರ ಸ್ವೀಕಾರ

 

ಬಿಜೆಪಿ ಹಿರಿಯ ಮುಖಂಡ ಅರುಣ್ ಜೆಟ್ಲಿ ಅವ ನಿಧನದ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರ ಸ್ವೀಕಾರ ಸಮಾರಂಭ ಆ.27ರಂದು ಬೆಂಗಳೂರಿನಲ್ಲಿ ನಡೆಯಲಿದೆ. ನಿರ್ಗಮಿತ ಅಧ್ಯಕ್ಷ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಲಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಆ.25ರಂದು ಪದಗ್ರಹಣ ಸಮಾರಂಭ ಏರ್ಪಡಿಸಲಾಗಿತ್ತು. ಆದರೆ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ನಿಧನರಾಗಿರುವ ಹಿನ್ನೆಲೆಯಲ್ಲಿ ಪದಗ್ರಹಣ ಸಮಾರಂಭವನ್ನು ಸ್ಥಗಿತಗೊಳಿಸಿ ಮುಂದೂಡಲಾಗಿತ್ತು. ಇದೀಗ ಆ.27 ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಜೀವಂಧರ್ ಜೈನ್ ತಿಳಿಸಿದ್ದಾರೆ.

ಕಾರ್ಯಕರ್ತರು ಆ.26ರಂದು ರಾತ್ರಿ ಬೆಂಗಳೂರಿಗೆ
ಪದಗ್ರಹಣ ಕಾರ್ಯಕ್ರಮಕ್ಕೆ ಪುತ್ತೂರು ಸೇರಿದಂತೆ ದ.ಕ. ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಪುತ್ತೂರಿನಿಂದ ಬೆಂಗಳೂರಿಗೆ ತೆರಳಲು ಸಾವಿರಾರು ಮಂದಿ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಆ.26ರ ರಾತ್ರಿ ಬಸ್‌ಗಳು ಮತ್ತು ಇತರ ವಾಹನಗಳಲ್ಲಿ ಕಾರ್ಯಕರ್ತರು ಬೆಂಗಳೂರಿಗೆ ತೆರಳಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.