HomePage_Banner
HomePage_Banner
HomePage_Banner
HomePage_Banner

ಪಂಜ ವನಿತಾ ಸಮಾಜದಿಂದ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ಶಿಬಿರ

 

ವನಿತಾ ಸಮಾಜ ಪಂಜ ಇದರ ಆಶ್ರಯದಲ್ಲಿ ತುಳಸಿ ಸ್ತ್ರೀಶಕ್ತಿ ಗೊಂಚಲು ಪಂಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇದರ ಸಹಯೋಗದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ಶಿಬಿರವು ಸೆ. 4ರಂದು ವನಿತಾ ಸಮಾಜದ ಕಟ್ಟಡದಲ್ಲಿ ನಡೆಯಿತು.

ಮಂಗಳೂರಿನ ಮಹಿಳಾ ಶಕ್ತಿ ಕೇಂದ್ರದ ಜಿಲ್ಲಾ ಸಂಯೋಜಕಿ ಶ್ರೀಮತಿ ವಿನಿತಾ ಕಾರ್ಯಕ್ರಮ ಉದ್ಘಾಟಿಸಿದರು. ತುಳಸಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಇದರ ಅಧ್ಯಕ್ಷೆ ಶ್ರೀಮತಿ ಭಾಗೀರಥಿ ರಿಕ್ಕಳ ಅಧ್ಯಕ್ಷತೆ ವಹಿಸಿದ್ದರು.

ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಚಂದ್ರಾ ಹೊನ್ನಪ್ಪ ಚಿದ್ಗಲ್, ಹಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಕಮಲಾ ಬಿ.ಕೆ., ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಕಮಲಾ ಬಿಡಾರಕಟ್ಟೆ ಮುಖ್ಯಅತಿಥಿಯಾಗಿ ಭಾಗವಹಿಸಿದ್ದರು. ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಗೀಶ್ ಮಲ್ಲಿಗೆಮಾಡು ಹಾಗೂ ಮಕ್ಕಳ ರಕ್ಷಣಾ ಘಟಕದ ಶಿವಾನಂದರವರು ಆರೋಗ್ಯ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಕುರಿತು ಮಾಹಿತಿ ನೀಡಿದರು.


ಪದ್ಮಾವತಿ ಚಿದ್ಗಲ್ ಪ್ರಾರ್ಥಿಸಿದರು. ರತ್ನಾವತಿ ಬೊಳ್ಳಾಜೆ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಭಾಗೀರಥಿ ಕಾರ್ಯಕ್ರಮ ನಿರೂಪಿಸಿದರು. ವನಿತಾ ಸಮಾಜದ ಕಟ್ಟಡ ಸಮಿತಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ. ಪ್ರಸಾದ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.