HomePage_Banner
HomePage_Banner

ಎನ್ನೆಂಸಿ: ಓಣಂ ಹಬ್ಬ ಆಚರಣೆ


ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿಸೆ.14ರಂದು ಓಣಂ ಹಬ್ಬದ ಆಚರಣೆ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ನಿರ್ದೇಶಕ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಹಾಗೂ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರಗೌಡ ಅತಿಥಿಗಳಾಗಿ ಉಪಸ್ಥಿತರಿದ್ದರು. ಪ್ರಸ್ತುತ ದಿನದಂದು ವಿದ್ಯಾರ್ಥಿಗಳಿಂದ ಮೋಹಿನಿಯಾಟ್ಟಂ, ಓಟ್ಟಂತುಳ್ಳಲ್, ವಂಜಿಪ್ಪಾಟ್, ತಿರುವಾದಿರ ಹಾಗೂ ಚೆಂಡೆ ಮೇಳ ಪ್ರದರ್ಶಿಸಲಾಯಿತು. ಪ್ರಾಂಶುಪಾಲರ ಹಾಗೂ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿಯವರ ಉಪಸ್ಥಿತಿಯಲ್ಲಿ ಉಪನ್ಯಾಸಕರ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ್ ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ವಿಷ್ಣುಪ್ರಶಾಂತ್ ವಂದಿಸಿದರು. ವಿದ್ಯಾರ್ಥಿಗಳಾದ ಜೈನಬ್‌ಜಿನಿರಾ ಹಾಗೂ ಸುನೋ ನಿರೂಪಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.