HomePage_Banner
HomePage_Banner
Breaking News

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜುನಲ್ಲಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ.ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ಸೆ. 19ರಂದು ಎನ್ ಎಂ ಸಿ ಮೈದಾನದಲ್ಲಿ ನಡೆಯಿತು. ಸಮಾರಂಭವನ್ನು ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉದ್ಘಾಟಿಸಿದರು. ಕಾಲೇಜು ಅಡಳಿತ ಮಂಡಳಿ ಸಲಹೆಗಾರರದ ಬಾಲಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿ ಗಳಾಗಿ ಸುಳ್ಯ ತಹಶಿಲ್ದಾರ್ ಕುಂಙಿ ಅಹ್ಮದ್, ಪಿ ಯು ದೈಹಿಕ ಶಿಕ್ಷಣ ಜಿಲ್ಲಾ ಸಂಯೋಜಕ ಪ್ರೇಮನಾಥ ಶೆಟ್ಟಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲೆ ಶ್ರೀಮತಿ ಹರಿಣಿ ಪುತ್ತೂರಾಯ ಸ್ವಾಗತಿಸಿದರು. ಉಪನ್ಯಾಸಕರಾದ ಕು.ಬೇಬಿ ವಿದ್ಯಾ ಹರೀಶ್ ಚಳ್ಳ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಭಟ್ಕಳ ವಂದಿಸಿದರು.

 

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.