ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಇಂದು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು.
ಜಾಥವು ತಾಲೂಕು ಆಸ್ಪತ್ರೆ ಸುಳ್ಯದಿಂದ ಪ್ರಾರಂಭಗೊಂಡು ಗಾಂಧಿನಗರದವರೆಗಾಗಿ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾಪನಗೊಂಡಿತು. ಜಾಥಾದಲ್ಲಿ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಅಧಿಕಾರಿ ವರ್ಗದವರು, ಆಶಾಕಾರ್ಯಕರ್ತೆರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ತಾಲೂಕಿನ ಜನಪ್ರತಿನಿಧಿಗಳು, ಸಂಘ ಸಂಸ್ಥೆಯ ಸದಸ್ಯರು ಪಾಲ್ಗೊಂಡಿದ್ದರು.