HomePage_Banner
HomePage_Banner

ಜಾಲ್ಸೂರು: ಕೆ.ಕೆ.ಕ್ಯಾಶ್ಯೂ ಇಂಡಸ್ಟ್ರೀಸ್ ಹಾಗೂ ಜ್ಞಾನಭಾರತಿ ವಿದ್ಯಾಸಂಸ್ಥೆ ಮೇಲೆ ಅಪಾಯಕಾರಿ ವಿದ್ಯುತ್ ತಂತಿ

ಜಾಲ್ಸೂರು ಗ್ರಾಮದ ಕಾಳಮನೆ ಎಂಬಲ್ಲಿರುವ ಕರುಣಾಕರ ಕೇನಾಜೆ ಅವರ ಮಾಲಕತ್ವದ ಕೆ.ಕೆ.ಕ್ಯಾಶ್ಯೂ ಇಂಡಸ್ಟ್ರೀಸ್ ಹಾಗೂ ಜ್ಞಾನಭಾರತಿ ವಿದ್ಯಾಸಂಸ್ಥೆಯ ಮೇಲ್ಬಾಗದಲ್ಲಿ ಅಪಾಯಕಾರಿ ವಿದ್ಯುತ್ ತಂತಿ ಹಾದು ಹೋಗಿದ್ದು, ಅ.14ರಂದು ಸಂಜೆ ವಿದ್ಯುತ್ ತಂತಿ ತುಂಡಾಗಿ ಕೆಳಗಿ ಬಿದ್ದು, ಕ್ಯಾಶ್ಯೂ ಇಂಡಸ್ಟ್ರೀಸ್ ನಲ್ಲಿ ಕೆಲಸದಲ್ಲಿ ನಿರತರಾಗಿದ್ದ ಮೂವರು ಮಹಿಳಾ ಕಾರ್ಮಿಕರಿಗೆ ವಿದ್ಯುತ್ ಆಘಾತ ಸಂಭವಿಸಿ,ಬಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ.

ಈ ವಿದ್ಯುತ್ ತಂತಿಯನ್ನು ಅಲ್ಲಿಂದ ತೆರವುಗೊಳಿಸಿ, ಮಾರ್ಗ ಬದಲಿಸುವಂತೆ ಕರುಣಾಕರ ಕೇನಾಜೆಯವರು ಸುಳ್ಯ ಮೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರರಿಗೆ ಎರಡು ವರ್ಷದ ಹಿಂದೆಯೇ ಅರ್ಜಿ ಸಲ್ಲಿಸಿದ್ದರೂ, ಮೆಸ್ಕಾಂ ಇಲಾಖೆಯವರು ಯಾವುದೇ ಕ್ರಮ ಕೈಗೊಂಡಿಲ್ಲ. ಅ.16ರಂದು ಬೆಳಿಗ್ಗೆ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸಿದ್ದಾರೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.