HomePage_Banner
HomePage_Banner
Breaking News

ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮೆಟ್ರಿಕ್ ನಂತರದ ರಾಜ್ಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

೨೦೧೯-೨೦ನೇ ಸಾಲಿನ ಸುಳ್ಯ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮೆಟ್ರಿಕ್ ನಂತರದ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ಮೂಲಕ ಅನುಷ್ಠಾನಗೊಳಿಸಲಾಗಿದ್ದು ಪ.ವರ್ಗದ/ಜಾತಿಯ ಅರ್ಹ ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಅರಿತು ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಲು ೨೮.೧೨.೨೦೧೯ ಕೊನೆಯ ದಿನವಾಗಿರುತ್ತದೆ.
ಕಳೆದ ವರ್ಷ ವಿದ್ಯಾರ್ಥಿ ವೇತನವನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳು ಕೂಡ ಪ್ರಸ್ತುತ ಸಾಲಿನಲ್ಲಿ ಎಸ್.ಎಸ್.ಪಿ ಪೋರ್ಟಲ್‌ನಲ್ಲಿ ಅರ್ಜಿಸಲ್ಲಿಸಬಹುದು. ವಿದ್ಯಾರ್ಥಿ ಶುಲ್ಕ ಪಾವತಿಸದೇ ಕಾಲೇಜಿಗೆ ಸೇರಿರುವ ವಿದ್ಯಾರ್ಥಿಗಳು, ಪ.ಜಾತಿ/ವರ್ಗದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು, ಕಾಲೇಜುಗಳಿಂದ ನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದಿರುವವರು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ನಮ್ಮ ರಾಜ್ಯದ ವಿದ್ಯಾರ್ಥಿಗಳು ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ.ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಂತಹ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಇಲಾಖೆಯ ತಾಲೂಕು ಕಚೇರಿಗಳಲ್ಲಿ ಪಡೆದು ಸರ್ಕಾರದ ನಿಯಮಾವಳಿಗಳ ಪ್ರಕಾರ ಅರ್ಜಿ ಸಲ್ಲಿಸಬಹುದು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.