HomePage_Banner
HomePage_Banner
HomePage_Banner
HomePage_Banner

ಜ. 12: ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಳದ ವತಿಯಿಂದ ಉಚಿತ ವೈದ್ಯಕೀಯ ಶಿಬಿರ

ಮರ್ಕಂಜ ಗ್ರಾಮದ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇಜರ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 157 ನೇ ಜನ್ಮದಿನದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರವು ಜ. 12 ರಂದು ಮರ್ಕಂಜ ವಿನಾಯಕ ಸಭಾಭವನ ರೆಂಜಾಳದಲ್ಲಿ ನಡೆಯಲಿದೆ. ಬೆಳಿಗ್ಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮರ್ಕಂಜ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋನಪ್ಪ ಪೂಜಾರಿ ಹೈದಂಗೂರು ಅಧ್ಯಕ್ಷತೆ ವಹಿಸಲಿರುವರು. ರೆಂಜಾಳ ಕ್ಷೇತ್ರದ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ಭಟ್ ಬಳ್ಳಕ್ಕಾನ ಉದ್ಘಾಟನೆ ನೆರವೇರಿಸಲಿರುವರು.

ಅತಿಥಿಗಳಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ಹರ್ಬರ್ಟ್ ಮೆರಿಯೋ ಪಿರೇರಾ ಗುತ್ತಿಗಾರು ವಲಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ, ರೆಂಜಾಳ ಶ್ರೀ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಬಾಣೂರು, ರೆಂಜಾಳ ರತನ್ ರಾಜ್ ರೈ , ಮರ್ಕಂಜ ಸ್ಫೂರ್ತಿ ಮಹಿಳಾ ಮಂಡಳದ ಅಧ್ಯಕ್ಷೆ ಶ್ರೀಮತಿ ಕೋಮಲಾಂಗಿ ಕೊಂಪುಳಿ, ಮರ್ಕಂಜ ಗ್ರಾಮ ಪಂಚಾಯತ್ ಸದಸ್ಯ ಆನಂದ ಗೌಡ ಬಾಣೂರು, ಸುಳ್ಯ ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ಚರಣ್ ರಾಜ್ ಕಾಯರ ಉಪಸ್ಥಿತರಿರುವರು ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.