HomePage_Banner
HomePage_Banner

ಎಲಿಮಲೆಯಲ್ಲಿ ಕನ್ನಡ ನುಡಿ ಜಾತ್ರೆಗೆ ಚಾಲನೆ

 

ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭ

ಕನ್ನಡ ಸಂಸ್ಕೃತಿ ಬಿಂಬಿಸಿದ ಆಕರ್ಷಕ ಮೆರವಣಿಗೆ

 

 

 

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ, ಎಲಿಮಲೆ ಸರಕಾರಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಎಲಿಮಲೆಯಲ್ಲಿ ಆರಂಭಗೊಂಡಿದೆ.

ಬೆಳಿಗ್ಗೆ ಎಲಿಮಲೆಯ ಎತ್ತಿನಹೊಳೆಯಿಂದ ಕನ್ನಡ ಭುವನೇಶ್ವರಿಯ ಮೆರವಣಿಗೆ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ತಾ.ಪಂ. ಸದಸ್ಯೆ ಯಶೋದಾ ಬಾಳೆಗುಡ್ಡೆ ಮೆರವಣಿಗೆ ಉದ್ಘಾಟಿಸಿದರು.

ಸಮ್ಮೇಳನಾಧ್ಯಕ್ಷ ಕೃ.ಶಾ.ಮರ್ಕಂಜ ಅವರನ್ನು ಅಲಂಕೃತ ತೆರೆದ ಜೀಪಿನಲ್ಲಿ ಕರೆತರಲಾಯಿತು. ಕನ್ನಡ ಭುವನೇಶ್ವರಿಯ ವೇಷ, ಕನ್ನಡ ಧ್ವಜ ಹಿಡಿದ ವಿದ್ಯಾರ್ಥಿಗಳು, ಪೂರ್ಣ ಕುಂಭ ಹಿಡಿದ ಮುತ್ತೈದೆಯರು, ಯಕ್ಷಗಾನ ವೇಷಗಳು, ಗೊಂಬೆಗಳು, ಕೀಲುಕುದುರೆ, ಕೋಲಾಟ ಮೆರವಣಿಗೆಗೆ ಮೆರುಗು ನೀಡಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.