HomePage_Banner
HomePage_Banner
HomePage_Banner
HomePage_Banner

ಅರೆಕಲ್ಲು : ಕರೋನಾ ವೈರಸ್ ನ ಬಗ್ಗೆ ಮಾಹಿತಿ ನೀಡುವ ಮೂಲಕ ಜಾಗೃತಿ ಕಾರ್ಯಕ್ರಮ

ಕೊಡಗು ಜಿಲ್ಲೆ ಸಂಪಾಜೆ ಗ್ರಾಮ ಅರೆಕಲ್ಲು ಶ್ರೀ ಅಯ್ಯಪ್ಪ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಕರೋನಾ ವೈರಸ್ ನ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.

ಈ ಒಂದು ಮಾರಕ ಕರೋನಾ ವೈರಸ್‌ನ ಜಾಗೃತಿ ಅಭಿಯಾನದಲ್ಲಿ ಸಂಪಾಜೆ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಮಲ್ಲಿಕಾರ್ಜುನ, ಕಿರಿಯ ಆರೋಗ್ಯ ಸಹಾಯಕ ಅನಂತ್ ಕುಮಾರ್, ಮಹಿಳಾ ಆರೋಗ್ಯ ಸಹಾಯಕಿ ಶ್ರೀಮತಿ ಯಶೋಧ, ಆರೋಗ್ಯ ಇಲಾಖಾ ಸಿಬ್ಬಂದಿಯವರಾದ ಶರತ್, ಗಣೇಶ್, ರಘು ಮತ್ತು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ, ಪಯಸ್ವಿನಿ ಸಹಕಾರಿ ಸಂಘದ ಅಧ್ಯಕ್ಷರಾದ ಅನಂತ್ ಎನ್.ಸಿ, ಸಂಪಾಜೆ ಗ್ರಾಮದ ಅರೆಕಲ್ಲು ಅಂಗನವಾಡಿ ಸಹಾಯಕಿ ಶ್ರೀಮತಿ ಶೋಭಾ ಹಾಗೂ ಅರೆಕಲ್ಲು ಶ್ರೀ ಅಯ್ಯಪ್ಪ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಪಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.