HomePage_Banner
HomePage_Banner
HomePage_Banner
HomePage_Banner

ಕೊರೋನಾ ವೈರಸ್ ಹಿನ್ನೆಲೆ : ಶಾಲಾ ಮಕ್ಕಳ ಪರೀಕ್ಷಾದಿನದಲ್ಲಿ ಮಾರ್ಪಾಡು

 

1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.23 ರೊಳಗೆ ಪರೀಕ್ಷೆ ಮುಗಿಸಿ ರಜೆ

ಎಸ್.ಎಸ್.ಎಲ್.ಸಿ. ಪರೀಕ್ಷೆ ನಿಗದಿಯಂತೆ ; ಶಿಕ್ಷಣ ಇಲಾಖೆ ಆದೇಶ

 

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪರೀಕ್ಷಾ ದಿನದ ವೇಳಾಪಟ್ಟಿಯಲ್ಲಿ ಮಾರ್ಪಾಡು ಗೊಳಿಸಿ ಆದೇಶ ಹೊರಡಿಸಿದೆ.

ಈಗಾಗಲೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ ಕೆಜಿ ಮತ್ತು ಯುಕೆಜಿ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ರಾಜ್ಯಾದ್ಯಂತ ಒಂದರಿಂದ ಹತ್ತನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೊರೋನಾ ವೈರಸ್ ನಿಂದ ಉಂಟಾಗಬಹುದಾದ ಅಪಾಯದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಆದಷ್ಟು ಬೇಗನೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ ಬೇಸಿಗೆ ರಜೆಯನ್ನು ಘೋಷಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 11ರಿಂದ 16ರವರೆಗೆ ಹಾಗೂ ಆರರಿಂದ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 23ರೊಳಗೆ ಪೂರ್ಣಗೊಳಿಸಿ ರಜೆ ನೀಡುವಂತೆ ಆದೇಶಿಸಲಾಗಿದೆ. ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಿ ನಂತರ ರಜೆ ಘೋಷಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.