HomePage_Banner
HomePage_Banner
HomePage_Banner

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪಂಜ, ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು, ನೆಲ್ಲಿತೀರ್ಥ, ಗುರುಪುರ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ ಹಾಗೂ ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಮೊರಾರ್ಜಿ ದೇಸಾಯಿ/ಡಾ.ಬಿ.ಆರ್.ಅಂಬೇಡ್ಕರ್/ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೫ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ೬ರಿಂದ ೧೦ನೇ ತರಗತಿಯವರೆಗೆ ಆಂಗ್ಲಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೇ ಉಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ನೀಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ೨೦ ಮೇ ೨೦೨೦ರಂದು ಬೆಳಿಗ್ಗೆ ೧೧ರಿಂದ ಮದ್ಯಾಹ್ನ ೧ರವರೆಗೆ ನಡೆಸಲಾಗುವುದು. ಅಭ್ಯರ್ಥಿಯು ತನ್ನ ಎಸ್.ಎ.ಟಿ.ಎಸ್. ಸಂಖ್ಯೆ, ಭಾವಚಿತ್ರ, ಜಾತಿ/ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏ.೩ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.
ದೂರವಾಣಿ ಸಂಖ್ಯೆ : ೯೧೬೪೦೬೩೨೨೩

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.