Breaking News

ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಸರಪಳಿ

Advt_Headding_Middle
Advt_Headding_Middle

 

ಬಂಟ್ವಾಳದ ಒಂದೇ ಕುಟುಂಬದ ಮೂವರಿಗೆ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಸೋಂಕು ವಕ್ಕರಿಸಿದ್ದು, ಒಂದೇ ಕುಟುಂಬದ ಮೂರು ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದ ಕಾರಣದಿಂದ ಸೋಂಕು ಪತ್ತೆಯಾಗಿದೆ. ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನಿಗೆ ಸೋಂಕು ದೃಢಪಟ್ಟಿದೆ. ಮೇ.1ರಂದು ಕೊರೋನ ಪತ್ತೆಯಾಗಿದ್ದ 69 ವರ್ಷದ P-578 ವೃದ್ದನಿಂದ ತಗುಲಿದ ಸೋಂಕು ಇದಾಗಿದೆ. ಈ ವೃದ್ದನ ಕುಟುಂಬದ ಮೂರು ಜನರಲ್ಲಿ ಸೋಂಕು ಇಂದು ಪತೆಯಾಗಿದೆ. ಬಂಟ್ವಾಳದಲ್ಲಿ ಮೃತಪಟ್ಟ P-390 ಮಹಿಳೆಯಿಂದ ವೃದ್ದನಿಗೆ ಸೋಂಕು ತಗುಲಿತ್ತು. ವೃದ್ದನಿಗೆ ಪಾಸಿಟಿವ್ ಹಿನ್ನೆಲೆಯಲ್ಲಿ ಆ ಮನೆಯ 8 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, ಸದ್ಯ ಮೂವರಿಗೆ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಮಂಗಳೂರಿನ ಫಸ್ಟ್ ನ್ಯೂರೋ ಸಂಪರ್ಕದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.

ಸದ್ಯ ದ.ಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ದ.ಕ ಜಿಲ್ಲೆಯಲ್ಲಿ ಈವರೆಗೆ 31 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ದ.ಕ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ೦3, ದ.ಕ ಜಿಲ್ಲೆಯಲ್ಲಿ ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 13.
ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 789ಕ್ಕೆ ಏರಿದೆ. ಇಂದು ಒಂದೇ ದಿನ 36 ಪ್ರಕರಣ ಪತ್ತೆಯಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.